ಚಿತ್ತಾಪುರ ತಾಲೂಕು ನ್ಯಾಯಾಲಯ ಆವರಣದಲ್ಲಿಅಟೋ ಪ್ರಚಾರ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ
ಕಲಬುರಗಿ:ಜೂ.24:“PAN-INDIA Rescue And Rehabilitation Campaign” ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ರಕ್ಷಣಾ ಕಾರ್ಯಾಚರಣೆ ಮತ್ತು ಜಾಗೃತಿ ಅಟೋ ಪ್ರಚಾರ ಅಭಿಯಾನ ಕಾರ್ಯಕ್ರಮಕ್ಕೆ ಸೋಮವಾರ (ಜೂನ್ 24 ರಂದು) ಚಿತ್ತಾಪುರ ತಾಲೂಕು ನ್ಯಾಯಾಲಯ ಆವರಣದಲ್ಲಿ ಚಿತ್ತಾಪುರ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಸಂತೋಷಕುಮಾರ ದೈವಜ್ಞ ಅವರು ಚಾಲನೆ ನೀಡಿದರು.
ನಂತರ ಅವರು ಮಾತನಾಡಿ, ಬಾಲ ಹಾಗೂ ಕಿಶೋರ ಕಾರ್ಮಿಕ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016 ರನ್ನು ಜಾರಿಗೆ ತರಲಾಗಿದ್ದು, ಈ ಕಾಯ್ದೆಯನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 14 ರಿಂದ 18ರ ವಯಸ್ಸಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಕಲಬುರಗಿ ಸಂಸ್ಕಾರ ಪ್ರತಿಷ್ಠಾನದ ನಿರ್ದೇಶಕ ಶ್ರೀವಿಠ್ಟಲ್ ಚಿಕಣಿ, ಅವರು “PAN-INDIA Rescue And Rehabilitation Campaign” ಉದ್ದೇಶವೆನೆಂದರೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನವದೆಹಲಿ ಮತ್ತು ಮಾನ್ಯ ಕರ್ನಾಟಕ ಹೈಕೋರ್ಟ ನಿರ್ದೇಶನದ ಮೇರೆಗೆ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್‍ವಸತಿಗೂಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೂಡುವ ಉದ್ದೇಶದಿಂದ ಈಗಾಗಲೇ ಕಲಬುರಗಿ ಜಿಲ್ಲೆಯಾದ್ಯಂತ ಜೂನ್ 1 ರಿಂದ 30 ರವರೆಗೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಗ್ಯಾರೇಜು, ಧಾಬಾ, ಹೋಟೆಲ್, ಕಾರ್ಖಾನೆ ಮತ್ತು ಮೈನ್ಸ, ಇಟ್ಟಿಗೆ ಭಟ್ಟಿ ಮತ್ತು ಕಟ್ಟಡ ನಿರ್ಮಾಣ ನಡೆಯುತ್ತಿರುವ ಸ್ಥಳಗಳಲ್ಲಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಇಂದು ಜಾಗೃತಿ ಅಟೋ ಪ್ರಚಾರ ಅಭಿಯಾನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆಂದು ತಿಳಿಸಿದರು.
ಕಲಬುರಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕಶ್ರೀ ಸಂತೋಷ ಕುಲಕರ್ಣಿ ಮಾತನಾಡಿ, 18 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಬಾರದು. ಒಂದು ವೇಳೆ ಕೆಲಸಕ್ಕೆ ನೇಮಿಸಿದ್ದÀಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016ರನ್ವಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳ ವರೆಗೆ ಜೈಲು ಶಿಕ್ಷೆ ಅಥವಾ 20,000 ರೂ. ರಿಂದ 50,000 ರೂ. ಗಳÀ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಗೌರವಾನ್ವಿತ ಭಾರತದ ಸವೋಚ್ಛ ನ್ಯಾಯಾಲಯವು ರೀಟ್ ಅರ್ಜಿ (ಸಿವಿಲ್) ಸಂಖ್ಯೆ 465/1986 ರಲ್ಲಿ ನೀಡಿರುವ ನಿರ್ದೇಶನದ್ವಯ ತಪ್ಪಿತಸ್ಥ ಮಾಲೀಕರು ತಾವು ನಿಯೋಜನೆಗೊಂಡ ಪ್ರತಿ ಮಗುವಿಗೆ 20,000 ರೂ. ಗಳ ಪರಿಹಾರವನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಶಂಕರ, ಮಕ್ಕಳ ಸಹಾಯವಾಣಿ-1098/112 ಕಾರ್ಯಕ್ರಮ ಸಂಯೋಜಕ ಬಸವರಾಜ ತೆಂಗಳಿ ಹಾಗೂ ಆಪ್ತಸಮಾಲೋಚಕ ದೇವೀಂದ್ರ, ಡಾನ್‍ಬಾಸ್ಕೋ ಸಂಸ್ಥೆಯ ಪೀರಪ್ಪಾ, ಮಾರ್ಗದರ್ಶಿ ಸಂಸ್ಥೆಯ ನಿರ್ದೇಶಕ ಆನಂದರಾಜ, ಸಂಸ್ಕಾರ ಪ್ರತಿಷ್ಠಾನ ಸಂಸ್ಥೆಯ ನಿರ್ದೇಶಕ ವಿಠ್ಠÀಲ್ ಚಿಕಣಿ ಉಪಸ್ಥಿತರಿದ್ದರು.