ವಿದ್ಯಾರ್ಥಿಗಳಿಗೆ, ಶಾಲಾ-ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್ ಸೌಕರ್ಯ ಒದಗಿಸಲು ಮನವಿ
ಕಲಬುರಗಿ:ಜೂ.24: ಜಿಲ್ಲೆಯಾದ್ಯಂತ ವಿವಿಧ ಹಳ್ಳಿಗಳಿಗೆ ಬಸ್ ಸೌಲಭ್ಯಕ್ಕಾಗಿ ಆಗ್ರಹಿಸಿ ಎಐಡಿಎಸ್ಓ ನೆತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗೀಯ ಕೇಂದ್ರ ಕಛೇರಿ ಮುಂದುಗಡೆ ಪ್ರತಿಭಟನೆ ಮೂಲಕ ಮಾನ್ಯ ಸಾರಿಗೆ ವಿಭಾಗೀಯ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ ಮಾತನಾಡುತ್ತಾ, ದೂರದ ಹಲವಾರು ಹಳ್ಳಿ-ಪಟ್ಟಣಗಳಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಕಲಬುರಗಿ ನಗರಕ್ಕೆ ಬರುತ್ತಾರೆ. ಆದರೆ ಜಿಲ್ಲೆಯಾದ್ಯಂತ ಹಲವಾರು ಹಳ್ಳಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಇಲ್ಲದೆ ಇರುವುದರಿಂದಾಗಿ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲಾಗುತ್ತಿಲ್ಲ. ಹಳ್ಳಿಗಳಿಂದ ಬರುವ ಕೆಲವೆ ಬಸ್ ಗಳು ಕೂಡ ನಿಲ್ಲಲು ಜಾಗವಿಲ್ಲದಂತೆ ತುಂಬಿ ಬರುತ್ತವೆ. ದಿನ ನಿತ್ಯವು ವಿದ್ಯಾರ್ಥಿಗಳು ಜೀವ ಭಯದಿಂದಲೇ ಪ್ರಯಾಣ ಬೆಳೆಸುತ್ತಿದ್ದಾರೆ. ಹಲವಾರು ಸಲ ಅಪಘಾತಗಳು ಕೂಡ ಸಂಭವಿಸಿವೆ. ಇದರ ಬಗ್ಗೆ ಅಧಿಕಾರಿಗಳು ಗಮನಕ್ಕೆ ಬಂದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಉಪಾಧ್ಯಕ್ಷರಾದ ಪ್ರೀತಿ ದೋಡ್ಡಮನಿ ಮಾತನಾಡಿ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಎಲ್ಲಾ ರೀತಿಯ ಅನುಕೂಲ ಮಾಡಿಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ ಯಾಗಬೇಕು. ಆದರೆ ಎμÉ್ಟೂೀ ಹಳ್ಳಿಗಳಿಗೆ ಕನಿಷ್ಠ ಬಸ್ ಸೌಲಭ್ಯವಿಲ್ಲದೆ ಇರುವುದರಿಂದ ಉನ್ನತ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅಧಿಕಾರಿಗಳು ಈ ಸಮಸ್ಯೆಗಳ ತೀವ್ರತೆಯ ಬಗ್ಗೆ ಎಚ್ಚೆತ್ತು ಕೊಂಡು ವಿದ್ಯಾರ್ಥಿಗಳ ಶಿಕ್ಷಣದ ಹಿತದೃಷ್ಟಿಯಿಂದ ಕೂಡಲೇ ಎಲ್ಲಾ ಹಳ್ಳಿಗಳಿಗೆ ಸಮಯಕ್ಕೆ ಸರಿಯಾಗಿ, ಅವಶ್ಯಕತೆಗೆ ತಕ್ಕಷ್ಟು ಬಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು.