ಪ್ರೊ. ಎನ್. ಚಿನ್ನಸ್ವಾಮಿ ಸೋಸಲೆಗೆ “ಶಾಹು ರತ್ನ ಪ್ರಶಸ್ತಿ”
ಸಂಜೆವಾಣಿ ವಾರ್ತೆ
ಹೊಸಪೇಟೆ ಜೂ24: ಪ್ರಸಕ್ತ ಸಾಲಿನ ಶಾಹು ರತ್ನ ಪ್ರಶಸ್ತಿಗೆ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ಎನ್. ಚಿನ್ನಸ್ವಾಮಿ ಸೋಸಲೆ ಭಾಜನರಾಗಿದ್ದಾರೆ.
ಧಾರವಾಡದ ಡಾ.ಬಿ. ಆರ್. ಅಂಬೇಡ್ಕರ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್, ಇತಿಹಾಸ ಸಂಶೋಧನಾ ಕ್ಷೇತ್ರದಲ್ಲಿ ಸೋಸಲೆ ಅವರು ಮಾಡಿದ ಸಾಧನೆ ಗುರುತಿಸಿ, ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಧಾರವಾಡದ ವಸತಿ ಶಾಲೆಯ ಬುದ್ಧ ವಿಹಾರದಲ್ಲಿ ಜೂ.26 ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸೋಸಲೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. 20 ಸಾವಿರ ನಗದು ಸೇರಿದಂತೆ ಇತರೆ ಗೌರವಗಳನ್ನು ನೀಡಿ ಗೌರವಿಸಲಾಗುವುದು ಎಂದು ಟ್ರಸ್ಟ್‍ನ ಕಾರ್ಯದರ್ಶಿ ಎಫ್.ಎಚ್.ಜಕ್ಕಪ್ಪನವರ ತಿಳಿಸಿದ್ದಾರೆ.