ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಸಂಜೆವಾಣಿ ವಾರ್ತೆ
ದಾವಣಗೆರೆ – ಜೂ.೨೪; ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್ನಿಂದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ನಗದಾಗಿ ವಿದ್ಯಾರ್ಥಿ ವೇತನ ವಿತರಿಸುವ ಯೋಜನೆ ಹಮ್ಮಿಕೊಂಡಿದೆ ಎಂದು ಟ್ರಸ್ಟ್ನ ಅಧ್ಯಕ್ಷರಾದ ಸಿ.ಆರ್. ವಿರೂಪಾಕ್ಷಪ್ಪ ತಿಳಿಸಿದ್ದಾರೆ.ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಮುದಾಯದ ಮಕ್ಕಳಿಗೆ ಸಾರ್ವಜನಿಕವಾಗಿ ಕೊಡಮಾಡುವ ವಿದ್ಯಾರ್ಥಿ ವೇತನ ಶೇಕಡ 85% ರಷ್ಟು ಅಂಕ ಪಡೆದ ಪ್ರತಿಭಾವಂತ ಮಕ್ಕಳು ಅರ್ಜಿ ಸಲ್ಲಿಸಬಹುದು. 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ಪ್ರಥಮ ಮತ್ತು ದ್ವಿತೀಯ ವರ್ಷ ಪಿ.ಯು.ಸಿ., ವ್ಯಾಸಂಗ ಮಾಡುತ್ತಿರುವ ವಿದಾರ್ಥಿ-ವಿದ್ಯಾರ್ಥಿನಿಯರು ಅಂಕಪಟ್ಟಿ ಜೆರಾಕ್ಸ್ನೊಂದಿಗೆ ಶಾಲಾ/ಕಾಲೇಜಿನ ಪ್ರವೇಶಕ್ಕೆ ಪಾವತಿಸಿದ ಶುಲ್ಕದ ರಶೀದಿಯ ಜೆರಾಕ್ಸ್ನೊಂದಿಗೆ ಕೊಡುವುದು.ವಿವರಕ್ಕೆ ಸಿ.ಆರ್. ವಿರೂಪಾಕ್ಷಪ್ಪ ಅಧ್ಯಕ್ಷರು, ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್, ಚನ್ನಗಿರಿ ರಂಗಪ್ಪ ಗಡಿಯಾರ ಗೋಪುರದ ಎದುರು, ರೈಲ್ಷೇ ಸ್ಟೇಷನ್ ರಸ್ತೆ, ದಾವಣಗೆರೆ-577001. ಜುಲೈ 01 ರಿಂದ 05 ರೊಳಗೆ ಮೊದಲು ಬಂದ 600 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ. ಕಛೇರಿ ವೇಳೆ ಸಮಯದಲ್ಲಿ ಆಸಕ್ತರು ಸಂಪರ್ಕಿಸಬಹುದು ಎಂದು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಭರತ್ ಚನ್ನಗಿರಿ ತಿಳಿಸಿದ್ದಾರೆ.