ಪೂರ್ವ ಭಾವಿ ಸಭೆ
ಬಾಗಲಕೋಟೆ,ಜೂ.24: ನಾಡಪ್ರಭು ಶ್ರೀ ಕೆಂಪೆಗೌಡ ಜಯಂತಿ ಹಾಗೂ ಡಾ. ಫ ಗು ಹಳಕಟ್ಟಿ ಜನ್ಮ ದಿನದ ನಿಮಿತ್ಯ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಶ್ರೀ ಕೆಂಪೆಗೌಡ ಹಾಗೂ ಡಾ.ಫ.ಗು.ಹಳಕಟ್ಟಿ ಜನ್ಮ ದಿನದ ನಿಮಿತ್ಯ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ನಾಡಪ್ರಭು ಕೆಂಪೆಗೌಡ ಜಯಂತಿಯನ್ನು ಜೂನ 27 ರಂದು ಹಾಗೂ ಫ.ಗು ಹಳಕಟ್ಟಿ ಅವರ ಜನ್ಮ ದಿನವಾದ ಜುಲೈ 2 ರಂದು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಎಂದು ಆಚರಿಸಲಾಗುವುದು ಎಂದರು.
ಕೆಂಪೆಗೌಡರ ಜಯಂತಿಯನ್ನು ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿ ಸರಕಾರಿ ಶಾಲೆ ಅಥವಾ ಕಾಲೇಜಿನಲ್ಲಿ ಆಚರಿಸಲಾಗುವದು, ಹಳಕಟ್ಟಿಯವರ ಜನ್ಮ ದಿನಾಚರಣೆಗಾಗಿ ನವನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ವೇಧಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅಲ್ಲದೇ ಶಾಲಾ ಕಾಲೇಜುಗಳಲ್ಲಿ ಪ್ರಬಂದ, ಭಾಷಣ ಸ್ಪರ್ಧೆ ಏರ್ಪಡಿಸಲಾಗುವುದು. ವೇಧಿಕೆ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಜನಪ್ರತಿನಿದಿಗಳು ಹಾಗೂ ಗಣ್ಯಮಾನ್ಯರನ್ನು ಆಮಂತ್ರಣ ಪತ್ರಿಕೆಗಳನ್ನು ನೀಡಿ ಆಹ್ವಾನಿಸಲಾಗುವುದು. ನುರಿತ ಉಪನ್ಯಾಸಕರಿಂದ ಉಪನ್ಯಾಸ ಮತ್ತು ಸಂಗೀತ ಕಲಾ ತಂಡಗಳಿಂದ ಸಂಗೀತ ಗಾಯನ ಕಾರ್ಯಕ್ರಮ ಏರ್ಪಡಿಸಲಾಗುವುದು. ಕಾರ್ಯಕ್ರಮಕ್ಕೆ ಕೇವಲ ನೇಕಾರ ಸಮುದಾಯದವರು ಸೇರದೆ, ಎಲ್ಲ ಸಮುದಾಯ ಭಾಂದವರು, ವಚನ ಸಾಹಿತ್ಯ ಪ್ರೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾಜಕ್ಕೆ ಕೊಡುಗೆ ನೀಡಿದ ಮಹನೀಯರ ಜನ್ಮ ದಿನಾರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಯಶಸ್ವೀಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ ಹಾಗೂ ಜಿಲ್ಲಾ ಶರಣ ಮತ್ತು ವಚನ ಸಾಹಿತ್ಯ ಪರಿಷತ್ ಪಧಾಧಿಕಾರಿಗಳು ಮತ್ತು ಸಮಾಜ ಮುಖಂಡರು ಇದ್ದರು.