ಪರಿಸರವನ್ನು ಸಂರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಜೂ.24: ಪರಿಸರವನ್ನು ನಾವು ಸಂರಕ್ಷಿಸಿದರೆ ಪರಿಸರ ನಮ್ಮನ್ನು ಖಂಡಿತವಾಗಿಯೂ ರಕ್ಷಿಸುತ್ತದೆ ಇದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ವಾಸ್ತುತಜÐ ಪರಮೇಶ್ ಹಾಡ್ಲಿ ತಿಳಿಸಿದರು.
ಅವರು ಪತಂಜಲಿ ಯೋಗಕೇಂದ್ರದ ವತಿಯಿಂದ ಪಟ್ಟಣದ ಹೊರವಲಯದಲ್ಲಿರುವ ಮಾತೃಭೂಮಿ ವೃದ್ದಾಶ್ರಮದಲ್ಲಿ ನೂರಾರು ಗಿಡಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಇಂದು ಮಾನವನಿಗೆ ಆರೋಗ್ಯ ಬಹಳ ಮುಖ್ಯವಾಗಿದ್ದು ನಮ್ಮ ಸುತ್ತಮುತ್ತಲಿನ ಪರಿಸರ ಉತ್ತಮವಾಗಿದ್ದರೆ ಮಾನವ ಕೂಡ ಆರೋಗ್ಯವಂತನಾಗಬಲ್ಲ. ಹೆಚ್ಚು ಹೆಚ್ಚು ಗಿಡಮರಗಳನ್ನು ನೆಡುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕು. ಪ್ರತೀವರ್ಷ ನಾನಾ ಕಾರಣಗಳಿಂದಾಗಿ ಅರಣ್ಯದ ಪ್ರಮಾಣ ಕಡಿಮೆಯಾಗುತ್ತಾ ಬರುತ್ತಿದೆ. ಇದು ಪರಿಸರ ಅಸಮತೋಲನಕ್ಕೆ ಪರೋಕ್ಷವಾಗಿ ಕಾರಣವಾಗುತ್ತಿದೆ. ಪರಿಸರ ಅಸಮತೋಲನದಿಂದ ನಾವೆಲ್ಲರೂ ಘೋರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಈಗಾಗಲೇ ಜಾಗತಿಕ ತಾಪಮಾನ ಅಧಿಕವಾಗಿ ಪ್ರಾಕೃತಿಕ ಅಸಮತೋಲನಕ್ಕೆ ಕಾರಣವಾಗುತ್ತಿವೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮಾನವನಿಗೆ ಅಪಾಯ ಕಟ್ಟಿಟ್ಟಬುತ್ತಿ. ಆದ್ದರಿಂದ ನಾವುಗಳೆಲ್ಲರೂ ಹುಟ್ಟುಹಬ್ಬ, ವಿವಾಹವಾರ್ಷಿಕೋತ್ಸವ, ಮುಂತಾದ ಕಾರ್ಯಕ್ರಮಗಳನ್ನು ಆಚರಿಸಿ ಹಣ ಪೆÇೀಲುಮಾಡುವ ಬದಲು ನಾಲ್ಕು ಗಿಡಗಳನ್ನು ನೆಟ್ಟು ಪೆÇೀಷಿಸಿದರೆ ಅದೇ ನಾವು ಈ ಪರಿಸರಕ್ಕೆ ನೀಡುವ ಕೊಡುಗೆ ಎಂದರು.
ಇದೇ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ ವೀರಭದ್ರಯ್ಯ, ಯೋಗಗುರು ಅಲ್ಲಮಪ್ರಭು, ಮಾತೃಭೂಮಿ ವೃದ್ದಾಶ್ರಮದ ವ್ಯವಸ್ಥಾಪಕ ನಾಗಣ್ಣ ಸೇರಿದಂತೆ ಹಲವರಿದ್ದರು.