ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅಭಿನಂದಿಸಿದ ಮಾಜಿ ಶಾಸಕ ಡೊಂಗರಗಾಂವ
ಅಥಣಿ :ಜೂ.24: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಸಿಕೊಂಡ ಬಳಿಕ ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನ ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷರು
ಹಾಗೂ ಅಥಣಿ ಮತಕ್ಷೇತ್ರದ ಮಾಜಿ ಶಾಸಕರಾದ ಶಹಾಜಹಾನ ಡೊಂಗರಗಾಂವ ಅವರು ಬೆಂಗಳೂರಿನಲ್ಲಿ ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿದರು.
ಈ ವೇಳೆ ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಮಾತನಾಡಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಸಮಗ್ರ ಅಭಿವೃದ್ಧಿ ಅದರಲ್ಲೂ ವಿಶೇಷವಾಗಿ ಅಥಣಿ ವಿಧಾನಸಭಾ ಕ್ಷೇತ್ರದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಅಥಣಿ ತಾಲೂಕಿನಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು ಯುವಕರಿಗೆ ಉದ್ಯೋಗ ಸಿಗುವ ನಿಟ್ಟಿನಲ್ಲಿ ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಬೃಹತ್ ಉದ್ಯೋಗಗಳನ್ನ ಸ್ಥಾಪಿಸಿ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಬೇಕು. ಹಾಗೂ ಕ್ಷೇತ್ರದಲ್ಲಿ ಪ್ರತಿ ವರ್ಷ ಅಕಾಲಿಕ ಮಳೆ ಹಾಗೂ ಹವಾಮಾನ ವೈಪರಿತ್ಯದಿಂದಾಗಿ ಈ ಭಾಗದ ದ್ರಾಕ್ಷಿ ಬೆಳೆಗಾರರಿಗೆ ಬಾರಿ ನಷ್ಟ ಉಂಟಾಗುತ್ತಿದ್ದು ಅಗತ್ಯ ಸಹಾಯಕ್ಕಾಗಿ ರಾಜ್ಯ ಸರ್ಕಾರಕ್ಕೆ ಹಾಗೂ ಆಗಸ್ಟ್ ತಿಂಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು ಯಾವುದೇ ಪ್ರಯೋಜನವಾಗಿಲ್ಲ. ತಾವು ಕೇಂದ್ರ ಸಚಿವರಾಗಿರುವುದರಿಂದ ವಿಶೇಷ ಮುತುವರ್ಜಿ ವಹಿಸಿ ಕೇಂದ್ರ ಸರ್ಕಾರಕ್ಕೆ ಈ ಭಾಗದ ಬೆಳೆಗಾರರ ಸಂಕಷ್ಟಗಳನ್ನ ತಿಳಿಸುವ ಮೂಲಕ ದ್ರಾಕ್ಷಿ ಹಾಗೂ ಒಣದ್ರಾಕ್ಷಿ ಬೆಳೆಗಳಿಗೆ ಸೇರಿದಂತೆ ಇನ್ನಿತರರ ಬೆಳೆಗಳಿಗೂ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಲ್ಲ ಮನವಿಗಳನ್ನ ಆಲಿಸಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿ, ಎರಡೂ ಪಕ್ಷಗಳ ಕಾರ್ಯಕರ್ತರ ಶ್ರಮ, ನಾಡಿನ ಜನತೆಯ ಆಶೀರ್ವಾದಕ್ಕೆ ಧನ್ಯವಾದಗಳನ್ನು ತಿಳಿಸಿದ ಅವರು ರಾಜ್ಯದ ಜನತೆ ಬಿಜೆಪಿ- ಜೆಡಿಎಸ್ ಹೊಂದಾಣಿಕೆಯನ್ನು ಮುಕ್ತ ಮನಸ್ಸಿನಿಂದ ಒಪ್ಪಿ ಆಶೀರ್ವಾದ ಮಾಡಿದ್ದಾರೆ ಹಾಗಾಗಿ ರಾಜ್ಯದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ. ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಅಭಿನಂದಿಸಿದರು.
ಈ ವೇಳೆ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ. ಶೋಭಾ ಕರಂದ್ಲಾಜೆ. ಡಾ. ಅಶ್ವತ್ಥನಾರಾಯಣ. ಸಿ ಟಿ ರವಿ. ಲೀಲಾದೇವಿ ಆರ್ ಪ್ರಸಾದ್ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಸೇರಿದಂತೆ ಹಲವರನ್ನು ಭೇಟಿಯಾದರು.