ವಿದ್ಯಾರ್ಥಿಗಳ ಬಸ್ ವ್ಯವಸ್ಥೆ ಕಲ್ಪಿಸಿದ ಶಾಸಕ ಲಕ್ಷ್ಮಣ ಸವದಿ ಅವರಿಗೆ ಗ್ರಾಮಸ್ಥರಿಂದ ಸನ್ಮಾನ
ಅಥಣಿ :ಜೂ.24: ಗ್ರಾಮೀಣ ಪ್ರದೇಶದ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಿಶೇಷ ಮುತುವರ್ಜಿ ವಹಿಸಿ ಅಥಣಿ ಘಟಕದಿಂದ ಶಾಸಕ ಲಕ್ಷ್ಮಣ ಸವದಿ ಅವರು ಝುಂಜರವಾಡ ಮತ್ತು ಸುಟ್ಟಟ್ಟಿ ಗ್ರಾಮಗಳಿಂದ ಝುಂಜರವಾಡ ಪ್ರೌಢ ಶಾಲೆಗೆ ಹೋಗಿ ಬರಲು ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ. ಹಾಗೂ ಗ್ರಾಮಸ್ಥರ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾಸಪ್ಪನ ತೋಟದಿಂದ ಅಥಣಿಯವರಗೆ ಸಂಚರಿಸುವ ಬಸ್ ಗೆ ಚಾಲನೆ ನೀಡಲಾಗಿದೆ.
ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಗೂ ಗ್ರಾಮಸ್ಥರ ಸುಗಮ ಸಂಚಾರಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರಿಗೆ ಝುಂಜರವಾಡ ಸುಟ್ಟಟ್ಟಿ ಮತ್ತು ಸತ್ತಿ ಗ್ರಾಮಸ್ಥರು ಹೃತ್ಪೂರ್ವಕ ಧನ್ಯವಾದಗಳನ್ನ ಸಲ್ಲಿಸುವ ಮೂಲಕ ಸತ್ಕರಿಸಿ ಸನ್ಮಾನಿಸಿದರು.