ಭಾರತ ಸೇವಾ ದಳದಲ್ಲಿ ಯೋಗ ದಿನಾಚರಣೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜೂ.೨೩; ಭಾರತ ಸೇವಾದಳ  ಭವನದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಭಾರತ ಸೇವಾದಳ ಜಿಲ್ಲಾ ಅಧ್ಯಕ್ಷರಾದ ಎಸ್. ಕೆ. ಬಸವರಾಜನ್  ಹೂವಿನ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿ ಜನರಿಗೆ ಶಾರೀರಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಯೋಗ ಮತ್ತು ಪ್ರಾಣಾಯಾಮ ಹಾಗೂ ಧ್ಯಾನದ ಅವಶ್ಯಕತೆ ಇದೆ ಎಂದು ತಿಳಿಸಿದರು. ಚಿತ್ರದುರ್ಗ ಜಿಲ್ಲೆಯಲ್ಲಿ ನೆಲೆಸಿ, ಯೋಗ ಸಾಧನೆಗೈದ ಮಲ್ಲಾಡಿಹಳ್ಳಿಯ ರಾಘವೇಂದ್ರ ಸ್ವಾಮೀಜಿಗಳನ್ನು ಇಂತಹ ಸಂದರ್ಭದಲ್ಲಿ ಸ್ಮರಿಸುವುದು  ಸೂಕ್ತ ಎಂದರು.   ಭಾರತ ಸೇವಾದಳ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 100 ಜನ ಶಿಕ್ಷಕರಿಗೆ ಮಲ್ಲಾಡಿಹಳ್ಳಿಯ ಆಶ್ರಮದಲ್ಲಿ ಒಂದು ವಾರ ಸಹಾಯಕ ಯೋಗ ಮತ್ತು ನೈತಿಕ ಶಿಕ್ಷಣ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಜಿಲ್ಲಾ ಕಾರ್ಯದರ್ಶಿ ನರೇನಹಳ್ಳಿ ಅರುಣ್ ಕುಮಾರ್ ಮಾತನಾಡಿ ಪರಿಸರ ಸಂರಕ್ಷಣೆಯನ್ನು ಮಾಡಿಕೊಳ್ಳಬೇಕು. ಇದರಿಂದ ಆರೋಗ್ಯ ಸುಧಾರಿಸುತ್ತದೆ ಎಂದು ತಿಳಿಸಿ, ಯೋಗ ಶಿಬಿರಗಳು ಜಿಲ್ಲೆಯ ಪ್ರತಿಯೊಂದು ತಾಲೂಕು ಗಳಲ್ಲೂ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.ವಲಯ ಸಂಘಟಕರಾದ ಎಂ ಅಣ್ಣಯ್ಯನವರು ಪ್ರಸ್ತಾವಿಕವಾಗಿ  ಯೋಗದ ಅವಶ್ಯಕತೆ ಕುರಿತು ಮಾತನಾಡಿ ಮಕ್ಕಳಿಗೆ ಬಾಲ್ಯದಿಂದಲೇ ಯೋಗ ಶಿಕ್ಷಣವನ್ನು ನೀಡಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಹಿರಿಯ ಕಾರ್ಯಕರ್ತ ಶಿವಣ್ಣ, ತಾಲೂಕು ಅಧಿನಾಯಕರುಗಳಾದ ಮಹಾಂತೇಶ್, ಪ್ರಾಣೇಶ್, ಮಂಜುನಾಥ, ಟಿ ಎಸ್. ಶಶಿಧರ್, ಮೆಹಬೂಬಿ ಹಾಗೂ ಪತಂಜಲಿ ಯೋಗ ಸಮಿತಿಯ ಯೋಗ  ಶಿಕ್ಷಕರಾದ ಹೇಮಾವತಿ ರವರು ಉಪಸ್ಥಿತರಿದ್ದು ಸಾರ್ವಜನಿಕರಿಗೆ ಯೋಗ ಶಿಕ್ಷಣವನ್ನು ನೀಡಿದರು. ನಾಗಭೂಷಣಚಾರ್  ಸ್ವಾಗತಿಸಿದರು, ದಾನೇಶ್ ಅವರು ವಂದಿಸಿದರು.