ಸ್ಪರ್ಧಾ ಸಂಕಲ್ಪ ಅಕಾಡೆಮಿ: ಯೋಗ ದಿನಾಚರಣೆ
ಬೀದರ್:ಜೂ.23: ನಗರದ ಸ್ಪರ್ಧಾ ಸಂಕಲ್ಪ ಅಕಾಡೆಮಿ ಕ್ಯಾಂಪಸನಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಸಂಭ್ರಮದಿಂದ ಆಚರಿಸಲಾಯಿತು.
ಯೋಗ ಶಿಕ್ಷಕರು ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಪ್ರಕಾರಗಳನ್ನು ಹೇಳಿಕೊಟ್ಟರು.
ಯೋಗದಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಆತ್ಮವಿಶ್ವಾಸ ಇಮ್ಮಡಿಗೊಳ್ಳುತ್ತದೆ. ಏಕಾಗ್ರತೆ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಯೋಗ ಶಿಕ್ಷಕ ವೀರೇಶ್ ಖತಗಾಂವೆ ಹೇಳಿದರು.
ಉತ್ತಮ ಆರೋಗ್ಯಕ್ಕಾಗಿ ಎಲ್ಲರೂ ನಿತ್ಯ ಯೋಗಾಭ್ಯಾಸ ಮಾಡಬೇಕು ಎಂದು ಯೋಗ ಶಿಕ್ಷಕ ಜಗದೀಶ್ ಬುಟ್ಟೆ ನುಡಿದರು.
ಅಕಾಡೆಮಿಯ ಅಧ್ಯಕ್ಷ ನಾಗೇಶ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.