ವಿದ್ಯಾರ್ಥಿಗಳು ಸಾಧಕರನ್ನು ಸ್ಪೂರ್ತಿಯಾಗಿಸಿಕೊಳ್ಳಿ
ಸಂಜೆವಾಣಿ ನ್ಯೂಸ್
ಮೈಸೂರು:ಜೂ.23:- ವಿದ್ಯಾರ್ಥಿಗಳು ತಮ್ಮ ಮುಂದಿನ ವಿದ್ಯಾಭ್ಯಾಸದ ಜತೆಗೆ ಉತ್ತಮ ಸಾಧÀಕರನ್ನು ಸ್ಪೂರ್ತಿಯಾಗಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮಥ್ರ್ಯ ರೂಢಿಸಿಕೊಳ್ಳಬೇಕು ಎಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಎಂ.ಮಮತಾ ಹೇಳಿದರು.
ನಗರದ ಸರಸ್ವತಿಪುರಂನಲ್ಲಿರುವ ಜೆಎಸ್‍ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 2023-24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭÀದಲ್ಲಿ ಮಾತನಾಡಿದ ಅವರು, ಪ್ರತಿ ವಿದ್ಯಾರ್ಥಿನಿಯೂ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳುವುದರೊಂದಿಗೆ ಅದಕ್ಕೆ ಸೂಕ್ತ ಉತ್ತರ ಪಡೆಯಬೇಕು. ಜತೆಗೆ ವಿದ್ಯಾರ್ಥಿಗಳು ತಮ್ಮ ಮುಂದಿನ ಬದುಕಿನಲ್ಲಿ ಸೇವಾ ಮನೋಭಾವ ಬೆಳೆಸಿಕೊಂಡು ಜೀವನೋತ್ಸಾಹದ ಗಣಿಗಳಾಗಬೇಕು ಎಂದು ಹೇಳಿದರು.
ಆದರ್ಶ ನಡೆ ನುಡಿಯ ಮೂಲಕ ಸವಾಜಮುಖಿಯಾಗಿ ಬೆಳೆಯಬೇಕು, ಸುತ್ತೂರು ಶ್ರೀಗಳ ಮೂಲಕ ಜೆಎಸ್‍ಎಸ್ ಶಿP್ಷÀಣ ಸಂಸ್ಥೆಗಳು ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಆದರ್ಶನೀಯವಾಗಿದೆ ಎಂದು ಶ್ಲಾಘಿಸಿದರು.
ಸಮಾಜದಲ್ಲಿನ ಉನ್ನತ ವರ್ಗಗಳ ವಿದ್ಯಾರ್ಥಿಗಳೊಂದಿಗೆ ಕೆಳವರ್ಗದ ಮಕ್ಕಳು ಸ್ಪರ್ಧಿಸಲು ಪ್ರತಿಭೆ, ಸಾಮಥ್ರ್ಯ ಬೆಳೆಸಿಕೊಳ್ಳಬೇಕು. ವಿದ್ಯೆಯಿಂದ ಗೌರವ ಸಿಗುತ್ತದೆ. ಪೆÇೀಷಕರು ಮಕ್ಕಳ ವಿದ್ಯಾಭ್ಯಾಸ ಮೊಟಕುಗೊಳಿಸಬಾರದು. ಬಾಲ್ಯ ವಿವಾಹ ವಾಡಿಸಬಾರದು ಎಂದು ಸಲಹೆ ನೀಡಿದರು.
ಜೆಎಸ್‍ಎಸ್ ಕಾಲೇಜು ಶಿP್ಷÀಣ ವಿಭಾಗದ ಸಹಾಯಕ ನಿರ್ದೇಶಕ ಬಿ.ನಿರಂಜನಮೂರ್ತಿ ಮಾತನಾಡಿ, ಜೆಎಸ್‍ಎಸ್ ಸಂಸ್ಥೆ ಧರ್ಮ, ಜಾತಿ ನೋಡದೇ ಸಮಾನವಾಗಿ ಶಿP್ಷÀಣ ನೀಡುವ ಮೂಲಕ ದೇಶ ಮತ್ತು ವಿದೇಶಗಳಲ್ಲಿ ಹೆಸರು ಮಾಡಿದೆ. ಜತೆಗೆ ರೈತರ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಅಂಕ ಪಡೆದ 96 ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಜೆಎಸ್‍ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ.ಪಿ. ರಾಜೇಶ್ವರಿ ಇದ್ದರು.