6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ
ಸಂಜೆವಾಣಿ ವಾರ್ತೆ
ನಂಜನಗೂಡು: ಸೆ.26:- ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದಲ್ಲಿ ನಡೆದ ರಾಜ್ಯ ಸರ್ಕಾರದ ಅಕ್ಷರ ದಾಸೋಹ – ಮಧ್ಯಾಹ್ನ ಉಪಹಾರ ಯೋಜನೆಯಡಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು 2024 – 25 ನೇ ಸಾಲಿನ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಟಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮದಲ್ಲಿ ನಂಜನಗೂಡು ಕ್ಷೇತ್ರದ ಜನಪ್ರಿಯ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ಕಾರ್ಯಕ್ರಮ ಉದ್ಘಾಟಿಸಿದರು ಅವರು ಪಾಲ್ಗೊಂಡು, ಮಕ್ಕಳಿಗೆ ಪೌಷ್ಟಿಕ ಆಹಾರವಾದ ಮೊಟ್ಟೆ, ಬಾಳೆ ಹಣ್ಣು, ಚಿಕ್ಕಿ ಮಿಠಾಯಿಯನ್ನ ವಿತರಣೆ ಮಾಡಿದರು.
ನಂತರ ಮಾತನಾಡಿ ಇದುವರೆಗೆ ಶಾಲೆಯಲ್ಲಿ ವಾರಕ್ಕೆರಡು ದಿನ ಮಾತ್ರ ಮೊಟ್ಟೆ ನೀಡಲಾಗುತ್ತಿತ್ತು ಆದರೆ ಪ್ರಗತಿಪರ ಕೈಗಾರಿಕೆ ಉದ್ಯಮಿ ಅಂಜಿಮ್ ಪ್ರೇಮ್ ಜಿ ಅವರು ಸಿ ಆರ್ ಎಸ್ ಫೌಂಡೇಶನ್ ವತಿಯಿಂದ 1591 ಕೋಟಿ ರೂ ನೀಡಿದ್ದು ಒಂದರಿಂದ 10ನೇ ತರಗತಿ ಸರ್ಕಾರಿ ಸಾಲ ಮಕ್ಕಳಿಗೆ ವಾರದಲ್ಲಿ ಆರು ದಿನಗಳು ಮೊಟ್ಟೆ ನೀಡುತ್ತಿದ್ದೇವೆ ಎಂದರು ಅಂಜಿಮ್ ಪ್ರೇಮ್ ಜಿ ಫೌಂಡೇಶನ್ ಸಯೋಗದಲ್ಲಿ ಶಾಲ ಮಕ್ಕಳ ಪೌಷ್ಟಿಕತೆ ವೃದ್ಧಿಸಲು ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನ ಪೌಷ್ಟಿಕತೆ ಆಹಾರ ವಿತರಣಾ ಮಕ್ಕಳಿಗೆ ವಿಟಮಿನ್ ಮತ್ತು ಪೆÇ್ರೀಟೀನ್ ಮುಖ್ಯವಾಗಿದ್ದು ಮಕ್ಕಳಿಗೆ ಬಿಸಿ ಊಟದ ಜೊತೆ ಮೊಟ್ಟೆಯನ್ನು ನೀಡಲಾಗುತ್ತಿದೆ ವಾರದಲ್ಲಿ ಎರಡು ದಿನ ಮೊಟ್ಟೆಯನ್ನು ನೀಡುತ್ತಾ ಬಂದಿದ್ದೇವೆ ರಾಜ್ಯದಲ್ಲಿ ಶೇಕಡ 88 ರಷ್ಟು ಮಕ್ಕಳು ಮೊಟ್ಟೆ ಪಡೆದರೆ ಶೇಕಡ 8ರಷ್ಟು ಮಕ್ಕಳು ಬಾಳೆಹಣ್ಣು ಹಾಗೂ ಉಳಿದ ಶೇಕಡ ನಾಕರಷ್ಟು ಮಕ್ಕಳು ಕಡಲೆಹಿಟ್ಟಿನ ಚಕ್ಕೆ ಮಿಠಾಯಿ ಪಡುತ್ತಿದ್ದಾರೆ ಎಲ್ಲ ಮಕ್ಕಳು ಪ್ರತಿಯೊಂದ ಸೌಲಭ್ಯಗಳನ್ನು ಪಡೆದು ಸಂದ್ರುಡವಾಗಬೇಕು ಉತ್ತಮ ಆಹಾರವನ್ನು ಸೇವಿಸಿ ಆರೋಗ್ಯ ಜೀವನ ಶೈಲಿಯಲ್ಲಿ ಬೆಳೆಯಬೇಕು ಎಲ್ಲ ಸರ್ಕಾರ ಸಮವಸ್ತ್ರ ಪಠ್ಯಪುಸ್ತಕ ಬಿಸಿ ಹಾಲಿನ ವಿತರಣೆ ರಾಗಿ ಮಾಲ್ಟ್ ಸಹ ಕೊಡುತ್ತಿದ್ದೇವೆ ಇಷ್ಟೆಲ್ಲ ಸೌಲಭ್ಯ ಪಡೆಯುವ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉತ್ತಮ ಪ್ರಜೆಯಾಗಬೇಕು ಎಂದು ಸಲಹೆ ನೀಡಿದರು
ಶಾಲೆಯ ಮುಖ್ಯಸ್ಥರು ಹೆಚ್ಚಿನ ಕೊಠಡಿ ಕಾಂಪೌಂಡು ಎತ್ತರ ಮೂಲಭೂತ ಸೌಕರ್ಯಗಳು ಬೇಕು ಎಂದು ಈ ಸಂದರ್ಭದಲ್ಲಿ ಶಾಸಕರಿಗೆ ಮನವಿ ಮಾಡಿದ ಮನವಿ ಮಾಡಿದರು ಇದಕ್ಕೆ ಸ್ಪಂದಿಸಿದ ಶಾಸಕರು ಆದಷ್ಟು ಬೇಗ ಒದಗಿಸಿಕೊಡುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವ ಮೂರ್ತಿ ನಗರಸಭೆ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಉಪಾಧ್ಯಕ್ಷರಾದ ರಿಯಾನಾ ಬಾನು ಃಔ ಮಹೇಶ್, ಶಿಕ್ಷಕರ ಸಂಘದ ಅಧ್ಯಕ್ಷರಾದ ಧರ್ಮರತ್ನಾಕರ್ ನಗರಸಭಾ ಸದಸ್ಯರಾದ ಗಾಯತ್ರಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ. ಎಂ ಶಂಕರ್ ಸೇರಿದಂತೆ ಹಲವು ಉಪಸ್ಥಿತರಿದ್ದರು.