ದೈಹಿಕ ಶಿಕ್ಷಣ ಶಿಕ್ಷಕರಿಗೆ ಸಹ ಶಿಕ್ಷಕರೆಂದು ಪರಿಗಣಿಸಲು ಮನವಿ
ಬೀದರ:ಜೂ.23:ದೈಹಿಕ ಶಿಕ್ಷಣ ಶಿಕ್ಷಕರ ಸುಮಾರು ವರ್ಷಗಳಿಂದ ಪ್ರಮುಖ ಬೇಡಿಕೆಯಾಗಿರುವ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸಿ ಮುಖ್ಯ ಶಿಕ್ಷಕರ ಮುಂಬಡ್ತಿ ಸೇರಿದಂತೆ ಸಹ ಶಿಕ್ಷಕರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದು , ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಇರುವಂತ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು, ಸರ್ಕಾರಿ /ಅನುದಾನಿತ ಶಾಲೆಗಳಲ್ಲಿ ಸೇವೆಸಲ್ಲಿಸುತ್ತಿರುವ ಶೇವಾಜೆಸ್ಟತೇ ಯಲ್ಲಿರುವ ಹಿರಿಯ ದೈಹಿಕ ಶಿಕ್ಷಕರನ್ನು ಪ್ರಭಾರ ನೀಡುವುದು, ಎಸ್ ಎ ಟಿ ಎಸ್ ನಲ್ಲಿ ದೈಹಿಕ ಶಿಕ್ಷಣವನ್ನು ಭಾಗ ಎ ನಲ್ಲಿ ಸೇರ್ಪಡೆ ಮಾಡದೆ ವಿಳಂಬುವಾಗುತ್ತಿರುವ ಗೊಂದಲವನ್ನು ನಿವಾರಿಸುವುದು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಮನವಿಯನ್ನು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ಮಾನ್ಯ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ನೃಪತುಂಗ ರಸ್ತೆ ಬೆಂಗಳೂರು ರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆಗಳು ಜುಲೈ 2024ರ ಅಂತ್ಯದ ಒಳಗಾಗಿ ಈಡೇರದೆ ವಿಳಂಬವಾದಲ್ಲಿ ನಮ್ಮ ಬೇಡಿಕೆಗಳು ಈಡೇರುವತನಕ ಪ್ರಸ್ತುತ ವರ್ಷದಿಂದ ಇಲಾಖೆಯ ಕ್ರೀಡಾಕೂಟಗಳನ್ನು ಬಹಿಷ್ಕರಿಸುವ ಮೂಲಕ ಅನಿರ್ದಿಷ್ಟಾವಧಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲು ಒಮ್ಮತದಿಂದ ಇಡೀ ರಾಜ್ಯಾದ್ಯಂತ ದೈಹಿಕ ಶಿಕ್ಷಣ ಶಿಕ್ಷಕರು ಒಮ್ಮತದಿಂದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಗೌರವಾನ್ವಿತರಾದ ತಾವುಗಳು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಮಾನ್ಯ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಕೆ ಜೋಶಿ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೀದರ ತಾಲೂಕ ಅಧ್ಯಕ್ಷರಾದ ರಾಬರ್ಟ್ ಡೇವಿಡ್, ಪ್ರಧಾನ ಕಾರ್ಯದರ್ಶಿಗಳಾದ ಓಂಕಾರ ಪಾಟೀಲ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೀದರ್ ತಾಲೂಕ ಅಧ್ಯಕ್ಷರು ಹಾಗೂ ನಮ್ಮ ಜಿಲ್ಲಾ ಸಂಘದ ರಾಜ್ಯ ಪರಿಷತ್ ಸದಸ್ಯರು ಆದ ರಾಜು ಸಾಗರ್,ಜಿಲ್ಲಾ ಶಾಖೆ ಬೀದರ್ ನ ಅಧ್ಯಕ್ಷರಾದ ಶಿವಕುಮಾರ ಸದಾಪುಲೆ, ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ತಾಂದಳೆ ಉಪಾಧ್ಯಕ್ಷರಾದ ವೀರಶೆಟ್ಟಿ ಯಲಮುರುಗೆ , ಕ್ರೀಡಾ ಕಾರ್ಯದರ್ಶಿಗಳಾದ ದತ್ತಾತ್ರೇ ರೆಡ್ಡಿ, ಹಾಜಿ ಪಾಷಾ, ಸುಭಾಷ್ ನಾಯಕ್, ಸಂಘಟನಾ ಕಾರ್ಯದರ್ಶಿಗಳಾದ ದಿಲೀಪ್ ಪಾಟೀಲ್, ಶಿವಲಿಂಗಯ್ಯ ಸ್ವಾಮಿ, ಜಿಲ್ಲಾ ಮಹಿಳಾ ಪ್ರತಿನಿಧಿ ಶ್ರೀಮತಿ ಗೀತಾ ನಾಟೇಕರ್ , ದಶರಥ ಉಡುಮ್ನಳ್ಳಿ ಹಾಗೂ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.