ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಸನ್ಮಾನ
ಅಥಣಿ :ಜೂ.23: ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಪಟ್ಟಣಕ್ಕೆ ಪ್ರಥಮ ಬಾರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಂಖಡ ಗಜಾನನ ಮಂಗಸೂಳಿ ಅವರು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಸತ್ಕರಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ ನನ್ನ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೂ ಹಾಗೂ ಮತ ಹಾಕಿದ ಮತದಾರಿಗೂ ಯಾವತ್ತೂ ಚಿರ ಋಣಿ ಯಾಗಿರುತ್ತೇನೆ.ಲೋಕಸಭಾ ವ್ಯಾಪ್ತಿಯಲ್ಲಿ ಇರುವ ಸಮಸ್ಯೆಗಳನ್ನ ಹೋಗಲಾಡಿಸಲು ಪ್ರಯತ್ನ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಜೊತೆಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರವನ್ನ ಮಾದರಿ ಕ್ಷೇತ್ರವನ್ನಾಗಿ ಮಾಡುವೆ ಎಂದು ಭರವಸೆ ನೀಡಿದರು.
ತದ ನಂತರ ಕಾಂಗ್ರೆಸ್ ಮುಖಂಡ ಹಾಗೂ ಉಪ ಚುನಾವಣೆ ಅಭ್ಯರ್ಥಿ ಗಜಾನನ ಮಂಗಸೂಳಿ ಮಾತನಾಡಿ, ಪ್ರಿಯಾಂಕಾ ಜಾರಕಿಹೊಳಿ ಅವರು ತಂದೆ ಸತೀಶ ಜಾರಕಿಹೊಳಿ ಅವರ ಗರಡಿಯಲ್ಲಿ ಪಳಗಿದ್ದಾರೆ. ಸಮಾಜಸೇವೆಯನ್ನು ಸಹ ಮಾಡಿದ್ದಾರೆ ಅದರ ಜೊತೆಗೆ ರಾಜಕೀಯ ಅನುಭವ ಸಹ ಇದೆ. ಕ್ಷೇತ್ರದ ಜನರ ಸಮಸ್ಯೆಗಳಿಗೆ ದ್ವನಿಯಾಗತ್ತಾರೆ ಎಂಬ ಭರವಸೆಯಿದೆ. ಅವರು ಈಗಾಗಲೇ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಕಾರ್ಯಪ್ರವೃತ್ತರಾಗಿದ್ದು ಆದಷ್ಟು ಬೇಗ ಸಮಸ್ಯೆಗಳು ಬಗೆಹರಿಯಲಿವೆ. ಅತೀ ಚಿಕ್ಕ ವಯಸ್ಸಿನಲ್ಲೇ ಲೋಕಸಭಾ ಸಂಸದರಾಗಿ ಆಯ್ಕೆಯಾಗಿದ್ದು ಕ್ಷೇತ್ರದ ಜನರು ಹೆಮ್ಮೆ ಪಡುವ ವಿಷಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ವೇಳೆ ಅಸ್ಲಮ್ ನಾಲಬಂದ. ಸಿದ್ಧಾರ್ಥ ಸಿಂಗೆ. ಅನಿಲ ಸುನದೋಳಿ. ನ್ಯಾಯವಾದಿ ಸುನೀಲ ಸಂಕ. ರಾಹುಲ್ ಮಂಗಸೂಳಿ. ಪ್ರಮೋದ ಬಿಳ್ಳೊರ. ಉದಯ ಸೋಳಸಿ. ಉಮರ ಸೈಯದ್. ಸೇರಿದಂತೆ ಹಲವು ಉಪಸ್ಥಿತರಿದ್ದರು.