ದರ್ಶನ್‌ಗೆ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ
ಸಂಜೆವಾಣಿ ವಾರ್ತೆ
ದಾವಣಗೆರೆ.ಜೂ.23: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಯಾವುದೇ ಕಾರಣಕ್ಕೂ ಕಾನೂನು ಚೌಕಟ್ಟಿನಿಂದ ತಪ್ಪಿಸಕೊಳ್ಳದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ವೀರಶೈವ ಸಮಾಜದ ಪ್ರತಿನಿಗಳು ಉಪವಿಭಾಗಾಕಾರಿಗೆ ಗುರುವಾರ ಮನವಿ ಸಲ್ಲಿಸಿದರು.ಮೊದಲು ಮಹಾನಗರ ಪಾಲಿಕೆಯ ಗಾಂ ಪ್ರತಿಮೆ ಬಳಿ ಪ್ರತಿಭಟಿಸಿದ ಸಮಾಜದ ಮುಖಂಡರು, ಬಳಿಕ ಉಪವಿಭಾಗಾಕಾರಿ ಕಚೇರಿಗೆ ತೆರಳಿ, ನಟ ದರ್ಶನ್ ಹಾಗೂ ಆರೋಪಿಗಳ ವಿರುದ್ಧ ಘೋಷಣೆ ಕೂಗಿದರು. ಜತೆಗೆ ಪ್ರಮುಖ ಆರೋಪಿ ದರ್ಶನ್‌ಗೆ ಗಲ್ಲು ಶಿಕ್ಷೆ ವಿಸುವಂತೆ ಆದಹಿಸಿದರು.ಈ ವೇಳೆ ಮಾತನಾಡಿದ ಮುಖಂಡ ಬಲ್ಲೂರು ರವಿಕುಮಾರ್, ದರ್ಶನ್ ಹಾಗೂ ಆತನ ಅಭಿಮಾನಿಗಳು ಮಾಡಿರುವುದು ಅಕ್ಷಮ್ಯ ಅಪರಾಧ. ಆದರೆ, ಆರೋಪಿತ ನಟನನ್ನು ಈ ಪ್ರಕರಣದಿಂದ ಬಚಾವ್ ಮಾಡಲು ಕೆಲ ರಾಜಕೀಯ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಜತೆಗೆ ದರ್ಶನ್ ಹಾಗೂ ಪ್ರಕರಣದ ಇತರೆ ಆರೋಪಿಗಳನ್ನು ಅಮಾಯಕರು ಎಂದು ಬಿಂಬಿಸುವ ಯತ್ನವೂ ನಡೆದಿದೆ. ಯಾವ ಕಾರಣಕ್ಕೂ ದರ್ಶನ್ ಹಾಗೂ ಟೀಮ್ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಾರದು ಎಂದು ಒತ್ತಾಯಿಸಿದರು.