ಸಾತ್ವಿಕ ಶುದ್ಧ ಆಹಾರ ಪದಾರ್ಥಗಳ ಸೇವನೆ ಉತ್ತಮ
ಸಂಜೆವಾಣಿ ವಾರ್ತೆ
ದಾವಣಗೆರೆ.ಜೂ.೨೩; ಸಾತ್ವಿಕ ಶುದ್ಧ ಆಹಾರ ಪದಾರ್ಥಗಳ ಸೇವನೆಯಿಂದ ದೇಹದ ಆರೋಗ್ಯದ ಜೊತೆ ಮಾನಸಿಕ ಆರೋಗ್ಯ ಪಡೆಯಲು ಸಾಧ್ಯ ಎಂದು ಕಣ್ವಕುಪ್ಪಿ ಗವಿಮಠದ ಡಾ.ಶಾಂತಲಿಂಗ ಶಿವಾಚಾರ್ಯ ಶ್ರೀಗಳು ಹೇಳಿದರು. ದಾವಣಗೆರೆಯ ಸುಶ್ರುತ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಆವರಣದಲ್ಲಿ ಮಾನವ ವಿಕಾಸ ಫೌಂಡೇಶನ್,ಭಾರತ ವಿಕಾಸ ಪರಿಷತ್ ಗೌತಮ ಶಾಖೆ ದಾವಣಗೆರೆ ಇವರ ಸಹಯೋಗದೊಂದಿಗೆ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ದಶಮಾನೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.  ನಾಲಿಗೆಯ ಕ್ಷಣಿಕ ರುಚಿಯ ಆಸೆಗಾಗಿ ನಾವು ದೇಹಕ್ಕೆ ಬೇಡವಾದ ಆಹಾರ ಪದಾರ್ಥಗಳನ್ನು ಸೇವಿಸುವುದರ ಮೂಲಕ ನಮ್ಮ ಆರೋಗ್ಯವನ್ನು ನಾವೇ ಹಾಳು ಮಾಡಿಕೊಳ್ಳುತ್ತಿದ್ದೇವೆ ಇದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ನಾವು ಕುಗ್ಗುತ್ತಿದ್ದೇವೆ ಎಂದು ಹೇಳಿದರು.
