ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚನೆ
ಸಂಜೆವಾಣಿ ವಾರ್ತೆ
ದಾವಣಗೆರೆ .ಜೂ.೨೨; ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಕಲ್ಪಿಸುವ ಜೊತೆಗೆ ಗ್ರಾಮದಲ್ಲಿ ಶಿಥಿಲಾವಸ್ಥೆ ತಲುಪಿರುವ ಸರ್ಕಾರಿ ಶಾಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಸೂಚಿಸಿದರು.ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ  ಅಧ್ಯಕ್ಷತೆ ವಹಿಸಿ ಮಾತಾನಾಡಿದ ಅವರು  ಈ ಹಿಂದೆ ಸಭೆಯಲ್ಲಿ ಚರ್ಚಿಸಲಾಗಿದ್ದ ಜಗಳೂರು ತಾಲ್ಲೂಕು ಮೂಡಲಮಾಚಿಕೆರೆ ಗ್ರಾಮದಲ್ಲಿ ಮನೆಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲು  ಪೈಪ್ ಲೈನ್ ವ್ಯವಸ್ಥೆ ಮಾಡಿದ್ದು, ಗಾಮದಲ್ಲಿನ ಮನೆಗಳಿಗೆ ಆಳವಡಿಸಿರುವ ನಲ್ಲಿಗಳಲ್ಲಿ ನೀರಿನ ಜೊತೆ ಚರಂಡಿ ನೀರು ಸಹಾ ಬರುತ್ತಿರುವ ವಿಚಾರವಾಗಿ ಕೆಲವು ಜಾಗಗಳಲ್ಲಿ ಪೈಪ್ ಲೈನ್ ಒಡೆದು ಹೊಗಿರುವುದನ್ನು ಈಗಾಗಲೇ ಗ್ರಾಮ ಪಂಚಾಯಿತಿಯಿAದ ದುರಸ್ಥಿಗೊಳಿಸಿ ಕುಡಿಯುವ ನೀರನ್ನು ಸರಬರಾಜು ಮಾಡಲಾಗಿರುತ್ತದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರ ತಿಳಿಸಿದರು.ನಲ್ಲಿಗಳಲ್ಲಿ ನೀರಿನ ಜೊತೆ ಚರಂಡಿ ನೀರು ಇನ್ನೂ ಕೂಡ ನಿವಾರಣೆಯಗಿರುವುದಿಲ್ಲ ಎಂಬ ವಿಚಾರವನ್ನು ತಿಳಿಸಿದರು.