ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್  ನೀಡುವ ಯೋಜನೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜೂ.೨೨: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ ಲಕ್ಕೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ನಡೆಸಲಾಯಿತು.ಭೂ ಮಾಪನಾ ಇಲಾಖೆ ಸೂಪರ್‍ವೈಸರ್ ರಮೇಶ್ ಮಾತನಾಡಿ, ಸ್ವಾಮಿತ್ವ ಯೋಜನೆಯು ಕೇಂದ್ರ ಸರ್ಕಾರ ಪ್ರಾಯೋಜಿತ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದರಿಂದ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್‍ಗಳನ್ನು (ಹಕ್ಕು ಪತ್ರ) ನೀಡುವ ಯೋಜನೆಯಾಗಿದೆ. ವ್ಯವಸಾಯ ಭೂಮಿಗಳಿಗೆ ಇರುವ ಮಾಲೀಕತ್ವದ ಪಹಣಿ, ಪಟ್ಟಾ ದಾಖಲೆಗಳಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ ಮಾಲೀಕತ್ವ ದಾಖಲೆಗಳನ್ನು ನೀಡುವ ಯೋಜನೆಯಾಗಿದೆ ಎಂದರು.