ವಿದ್ಯುತ್ ತಗುಲಿ ಬಾಲಕ ಸಾವು
ಕಲಬುರಗಿ,ಜೂ.22-ನೀರಿನ ನಳಕ್ಕೆ ಮೋಟಾರ್ ಹಚ್ಚುತ್ತಿದ್ದ ವೇಳೆ ವಿದ್ಯುತ್ ತಗುಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ನಗರದ ಬಿದ್ದಾಪುರ ಕಾಲೋನಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಭೀಮಾಶಂಕರ ಸುಭಾಶ್ಚಂದ್ರ (13) ಮೃತಪಟ್ಟ ಬಾಲಕ. ವಿದ್ಯುತ್ ತಗುಲಿ ಬಾಲಕ ಮೃತಪಟ್ಟ ಸುದ್ದಿ ತಿಳಿದು ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು. ಸುದ್ದಿ ತಿಳಿದು ಅಶೋಕನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
ವಿದ್ಯುತ್ ತಗುಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಬಿದ್ದಾಪುರ ಕಾಲೋನಿಯ ನಾಗರಿಕರು ಆಗ್ರಹಿಸಿದ್ದಾರೆ.