ಗ್ಯಾಸ್ ಸಿಲೆಂಡರ್ ಸ್ಫೋಟ: ಮೃತನ ಮನೆಗೆ ಸಚಿವರ ಭೇಟಿ
ಕಲಬುರಗಿ,ಜೂ.22-ನಿನ್ನೆ ನಗರದ ಸಪ್ತಗಿರಿ ಹೊಟೇಲ್‍ನಲ್ಲಿ ನಡೆದ ಗ್ಯಾಸ್ ಸಿಲೆಂಡರ್ ಸ್ಪೋಟದಲ್ಲಿ ಸಾವನ್ನಪ್ಪಿದ ಮಲ್ಲಿಕಾರ್ಜುನ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಭೇಟಿ ನೀಡಿ ಸಾಂತ್ವನ ಹೇಳಿದರು.
ನಂತರ ನಗರದ ಜಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಆರೋಗ್ಯ ವಿಚಾರಿಸಿದರು.