ಮಾಜಿ ಸಂಸದ ಜೊಲ್ಲೆ ನೇತೃತ್ವದಲ್ಲಿ ಬಿಜೆಪಿ ಆತ್ಮಾವಲೋಕನ ಸಭೆ
ಅಥಣಿ : ಜೂ.22:ಚುನಾವಣೆಯಲ್ಲಿ ಸೋಲು ಗೆಲುವು ಸರ್ವೆ ಸಾಮಾನ್ಯ, ಆದರೆ ಸೋಲನ್ನೇ ಸವಾಲಾಗಿ ಸ್ವೀಕರಿಸಿ ಕ್ಷೇತ್ರದ ಜನರ ಜೊತೆ ನಿರಂತರವಾಗಿ ಸಂಪರ್ಕ ಇಟ್ಟುಕೊಂಡು, ಜನರ ಕಷ್ಟಗಳಿಗೆ ಸ್ಪಂದಿಸುತ್ತಾ ಮತ್ತೆ ಪಕ್ಷ ಸಂಘಟನೆಯತ್ತ ಗಮನಹರಿಸೋಣ.ಮುಂಬರುವ ಎಲ್ಲಾ ಚುನಾವಣೆಯೂ ಜೊಲ್ಲೆ ಪರಿವಾರ ಸದಾ ನಿಮ್ಮ ಜೊತೆಗಿರುತ್ತದೆ ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಭರವಸೆ ನೀಡಿದರು.
ಅವರು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯ ಅಥಣಿ ಪಟ್ಟಣದಲ್ಲಿ ಲೋಕಸಭಾ ಚುನಾವಣೆ
ಆತ್ಮಾವಲೋಕನ ಸಭೆ ಹಾಗೂ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ವೇಳೆ ಜೆಡಿಎಸ್ ಪಕ್ಷ ರಾಜ್ಯ ಹಿರಿಯ ಉಪಾಧ್ಯಕ್ಷರು ಹಾಗೂ ಅಥಣಿ ಕ್ಷೇತ್ರದ ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಅವರು ಮಾತನಾಡಿ ಅಥಣಿ ಮತಕ್ಷೇತ್ರದಲ್ಲಿ ಸುಮಾರು 8 ಸಾವಿರಕ್ಕೂ ಅಧಿಕ ಮತಗಳ ಲೀಡ್ ಪಡೆದಿರುವುದರಿಂದ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳ ಶಕ್ತಿ ಹೆಚ್ಚಳವಾಗಿದೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದ್ದು ರಾಜ್ಯದ 5 ಜನ ಮಂತ್ರಿ ಯಾಗಿದ್ದಾರೆ. ನೀವು ಚುನಾವಣೆಯಲ್ಲಿ ಸೋತಿರಬಹುದು ಆದರೆ ನಮ್ಮ ಸಂಸದರು ಜೊಲ್ಲೆಯವರೇ ನಿಮ್ಮ ಹಿಂದೆ ಕ್ಷೇತ್ರದ ಸುಮಾರು 6 ಲಕ್ಷ 50 ಸಾವಿರ ಮತದಾರರು ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಸೇರಿದಂತೆ ನಾವೆಲ್ಲರೂ ನಿಮ್ಮ ಜೊತೆಯಾಗಿದ್ದೇವೆ ತಾವು ಕೇಂದ್ರದಲ್ಲಿ ನಮ್ಮ ಸರ್ಕಾರ ಇರುವುದರಿಂದ ನೀವೇ ಸಂಸದ ರೆಂದು ತಿಳಿದು ಕ್ಷೇತ್ರದ ಅಭಿವೃದ್ಧಿ ಕೆಲಸಕಾರ್ಯಗಳಲ್ಲಿ ಕಾರ್ಯಪ್ರವೃತ್ತರಾಗಿ ಎಂದು ಮನವಿ ಮಾಡಿದರು.
ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಶಕ್ತಿ ಹೆಚ್ಚಾಗಬೇಕು. ಕೇಂದ್ರ ಸರ್ಕಾರದಿಂದ ಆಗಬಹುದಾದ ಅಭಿವೃದ್ಧಿ ಕಾರ್ಯಕ್ಕಾಗಿ ನಿರಂತರ ಪ್ರಯತ್ನ ಮಾಡುವುದು
ಕ್ಷೇತ್ರದಲ್ಲಿ ಪ್ರತಿ ವರ್ಷ ಅಕಾಲಿಕ ಮಳೆ ಹಾಗೂ ಹವಾಮಾನ ವೈಪರಿತ್ಯದಿಂದಾಗಿ ಈ ಭಾಗದ ದ್ರಾಕ್ಷಿ ಬೆಳೆಗಾರರಿಗೆ ಬಾರಿ ನಷ್ಟ ಉಂಟಾಗುತ್ತಿದ್ದು ರಾಜ್ಯ ಸರ್ಕಾರಕ್ಕೆ ಅಗತ್ಯ ಸಹಾಯಕ್ಕಾಗಿ ಆಗಸ್ಟ್ ತಿಂಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಸರ್ಕಾರ ಯಾವ ನಿರ್ಧಾರ ಕೈಗೊಂಡಿದೆ ಎಂದು ತಿಳಿಯುತ್ತಿಲ್ಲ. ದ್ರಾಕ್ಷಿ ಬೆಳೆಗಾರರ ಬಗ್ಗೆ ರಾಜ್ಯ ಸರ್ಕಾರದ ನಿರಾಸಕ್ತಿ. ಎತ್ತಿ ತೋರಿಸುತ್ತದೆ ಎಂದರು
ಈ ಸಂದರ್ಭದಲ್ಲಿ ಮಾಜಿ ಶಾಸಕ ಮಹೇಶ ಕುಮಟಳ್ಳಿ,
ಮುಖಂಡರಾದ ಉಮೇಶರಾವ ಬಂಟೋಡಕರ, ಸಿದ್ದಪ್ಪ ಮುದಕಣ್ಣವರ ಮಾತನಾಡಿದರು.
ಈ ವೇಳೆ ಮಂಡಲ ಅಧ್ಯಕ್ಷ ರವಿ ಸಂಕ, ಎ.ಎ.ಹುದ್ಧಾರ, ಪ್ರಭಾಕರ ಚವ್ಹಾಣ, ಬಸವರಾಜ್ ರೋಡಗಿ. ರಮೇಶಗೌಡ ಪಾಟೀಲ, ಗಿರೀಶ ಬುಟಾಳೆ, ಗುರುಮೂರ್ತಯ್ಯ ಕಾಡದೇವರಮಠ, ಸೇರಿದಂತೆ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.