ಅಂತರಾಷ್ಟ್ರೀಯ ಯೋಗ ದಿನಾಚರಣೆ
ಕೊಲ್ಹಾರ:ಜೂ.22: ತಾಲ್ಲೂಕಿನ ರೋಣಿಹಾಳ ಗ್ರಾಮ ಪಂಚಾಯಿತಿ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯ ಅಡಿ ಗ್ರಾಮದಲ್ಲಿ ನಿರ್ಮಿಸಿದ “ಅಮೃತ ಸರೋವರ ಆವರಣದಲ್ಲಿ”
ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಕನ್ಯಾ ಲಂಬು ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು ಯೋಗವು ಭಾರತದ ಭವ್ಯ ಪರಂಪರೆಯ ಪ್ರತೀಕವಾಗಿದೆ. ಯೋಗದಿಂದ ಮಾನಸಿಕ ನೆಮ್ಮದಿ, ಸದೃಢ ಆರೋಗ್ಯ ದೊರೆಯುತ್ತದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ ಸಿಬ್ಬಂದಿಗಳು, ಸ್ವ ಸಹಾಯ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.