ಉತ್ತಮ ಆರೋಗ್ಯಕ್ಕೆ ದಿನನಿತ್ಯ ಯೋಗ ಮಾಡಿ: ವಿಜಯಲಕ್ಷ್ಮಿ ಪಾಟೀಲ
ಹುಮನಾಬಾದ್: ಜೂ.22:ಮಾನಸಿಕ ಒತ್ತಡವನ್ನು ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರತಿಯೂಬ್ಬರು ದಿನನಿತ್ಯ ಯೋಗಾಸನ ಮಾಡುವ ಹವ್ಯಾಸ ಬೆಳೆಸಿಕೊಳ್ಳಬೇಕು. ಎಂದು ಶ್ರೀ ಅನ್ನಪುರ್ಣೇಶ್ವರಿ ದೇವಿ ಮಹಿಳಾ ಟ್ರಸ್ಟ್ನ ತಾಲ್ಲೂಕು ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ ಸಲಹೆ ನೀಡಿದರು.
ಪಟ್ಟಣದ ಶ್ರೀ ಅನ್ನಪುರ್ಣೇಶ್ವರಿ ದೇವಿ ಮಹಿಳಾ ಟ್ರಸ್ಟ್ನ ಆವರಣದಲ್ಲಿ ಶುಕ್ರವಾರ ಆಯೋಜಿಸಿದ 10ನೇ ವಿಶ್ವ ಯೋಗ ದಿಚಾರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯೋಗಾಸನ ಮಾಡುವುದರಿಂದ ಮಕ್ಕಳು ಓದುವಾಗ ಏಕಾಗ್ರತೆ ವೃದ್ಧಿಯಾಗುತ್ತದೆ. ಮನುಷ್ಯನ ಆರೋಗ್ಯ ಹಾಗೂ ಸ್ವಸ್ಥ ಸಮಾಜಕ್ಕೆ ಯೋಗ ಬಹಳ ಮುಖ್ಯವಾಗಿದ್ದು, ಎಲ್ಲರು ಯೋಗ ಮಾಡುವ ಮೂಲಕ ಸ್ವಸ್ಥ, ಸುಂದರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಶ್ರೀ ಅನ್ನಪುರ್ಣೇಶ್ವರಿ ದೇವಿ ಮಹಿಳಾ ಟ್ರಸ್‍ನ ತಾಲ್ಲೂಕು ಉಪಾಧ್ಯಕ್ಷೆ ಶೋಭಾ ಗುರಮಿಟಕಲ್, ಕಾರ್ಯದರ್ಶಿ ಸುರೇಖಾ ವಿಭೂತಿ, ಕೋಶಾಧ್ಯಕ್ಷೆ ಸುಧಾರಾಣಿ ಪುಜಾರಿ, ಸದಸ್ಯರಾದ್ ಅನಿತಾ ಚಿದ್ರಿ, ದ್ರೋಪತಿ ಶಮಶಾಬಾದೆ, ವಿಮಲಾ ಸಂಗಮಕರ್, ಅನಿತಾ ಅಶೋಕ, ಕವಿತಾ ವಿಭುತಿ, ಇದ್ದರು.