ಚಿದಂಬರ ಶಿಕ್ಷಣ ಸಂಸ್ಥೆಯಲ್ಲಿ ಯೋಗ ದಿನಾಚರಣೆ
ಬೀದರ್:ಜೂ.22: ಇಲ್ಲಿಯ ಚಿದಂಬರ ಶಿಕ್ಷಣ ಸಂಸ್ಥೆ ಕ್ಯಾಂಪಸನಲ್ಲಿ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜು, ಶ್ರೀ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಹಾಗೂ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆ ವತಿಯಿಂದ ಶುಕ್ರವಾರ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಯೋಗ ಶಿಕ್ಷಕ ಗುರುನಾಥ ಮೂಲಗೆ ಹಾಗೂ ಎನ್.ಕೆ. ಜಾಬಶೆಟ್ಟಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಯೋಗದ ವಿಧಾನ ಹೇಳಿಕೊಟ್ಟರು.
ಚಿದಂಬರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ, ಪ್ರಾಚಾರ್ಯರಾದ ಡಾ. ಚಂದ್ರಕಾಂತ ಹಳ್ಳಿ, ಡಾ. ಚಂದ್ರಪ್ಪ ಭತಮುರ್ಗೆ, ನಾಗಪ್ಪ ಜಾನಕನೋರ, ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ ಹಾಗೂ ಸಿಬ್ಬಂದಿ ಇದ್ದರು.