ಮಲೇರಿಯಾ ನಿಯಂತ್ರಣಕ್ಕೆ ಕೈ ಜೋಡಿಸಿ
ಕರಜಗಿ:ಜೂ.22:ಮಲೇರಿಯಾ,ಸೊಳ್ಳೆಯಿಂದ ಮನುಷ್ಯನಿಗೆ ಹರಡುವ ರೋಗ. ಅನಾಫಿಲಿಸ್ ಸೊಳ್ಳೆ ಕಚ್ಚಿದಾಗ ಜ್ವರ ಬರುತ್ತದೆ. ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ’ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ವಿಠ್ಠಲ ಬಡಿಗೇರ ಹೇಳಿದರು.ಅವರು ಅಫಜಲಪುರ ತಾಲೂಕಿನ ಮಣ್ಣೂರ ಗ್ರಾಮ ಪಂಚಾಯತಿಯಲ್ಲಿ ಪ್ರಾಥಮಿಕ ಅರೋಗ್ಯ ಕೇಂದ್ರದ ವತಿಯಿಂದ ನಡೆದ ಮಲೇರಿಯಾ ವಿರೋಧಿ ಮಾಸಾಚರಣೆ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿ.ಒಂದು ಸಲ ಈ ಅನಾಫಿಲಿಸ್ ಸೊಳ್ಳೆ ಮನುಷ್ಯರಿಗೆ ಕಚ್ಚಿದ ಬಳಿಕ ಪ್ಲಾಸ್ಮೋಡಿಯಾ ಮನುಷ್ಯನ ಯಕೃ???ನಲ್ಲಿ ತನ್ನ ಸಂತಾನಾಭಿವೃದ್ಧಿ ಮಾಡಿ, ಸೋಂಕು ಉಂಟು ಮಾಡುತ್ತದೆ. ಕೆಂಪು ರಕ್ತದ ಕಣಗಳನ್ನು ನಾಶಪಡಿಸುತ್ತದೆ. ಸಾಮಾನ್ಯವಾಗಿ ಮಲೇರಿಯಾ ಜ್ವರವನ್ನು ಹೊಂದಿದ ವ್ಯಕ್ತಿಗಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ವಿಪರೀತ ಜ್ವರ, ಹಲ್ಲು ಕಚ್ಚಿಕೊಳ್ಳುವಷ್ಟು ಚಳಿ, ಜತೆಗೆ ಮೈಕೈ ನೋವು ಸಾಮಾನ್ಯ ಸಮಸ್ಯೆಗಳಾಗಿ ಕಾಡುತ್ತವೆ. ಮೊದಲೇ ಇವುಗಳ ಬಗ್ಗೆ ಅರಿತು ಚಿಕಿತ್ಸೆ ಪಡೆದರೆ ಸಾವು ಸಂಭವಿಸುವುದನ್ನು ತಪ್ಪಿಸಬಹುದು ಎಂದು ಹೇಳಿದರು.
ಮಲೇರಿಯಾ ಮೇಲ್ವಿಚಾರಕ ಸಂಜೀವಕುಮಾರ ಸಿಂದೆ ಮಾತನಾಡಿ ನಮ್ಮ,’ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು.ಸಂಜೆ ಸೊಳ್ಳೆಗಳು ಹೆಚ್ಚುವುದರಿಂದ ರಾತ್ರಿ ವೇಳೆ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಮೊದಲೇ ನಾವು ಸೊಳ್ಳೆಗಳ ತಾಣವನ್ನು ನಾಶಮಾಡಿ ಸೊಳ್ಳೆಗಳು ಹೆಚ್ಚಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು
ಈ ಸಂದರ್ಭದಲ್ಲಿ ಗ್ರಾ ಪಂ ಸದಸ್ಯ ಬಸವರಾಜ ವಾಯಿ ಮುಖಂಡರಾದ ಚಂದ್ರಕಾಂತ ದೈತನ ಸಂತೋಷ ಅಲ್ಲಾಪೂರ ಶಿವಲಿಂಗೇಶ್ವರ ಜಾಲವಾದಿ ಸಮುದಾಯ ಆರೋಗ್ಯಾಧಿಕಾರಿ ಸ್ವಪ್ನಾ ಆಶಾ ಕಾರ್ಯಕರ್ತೆಯರಾದ ಭೌರಮ್ಮ ಲೋಹಾರ ಸುಜಾತಾ ಪತ್ತಾರ ಕವಿತಾ ಹಡಪದ ಶಬಾನಾ ಕೊರಬು ಗೌರಾಬಾಯಿ ಮೋಸಲಗಿ ಗ್ರಾ ಪಂ ಸಿಬ್ಬಂದಿ ಭಾಗೇಶ ಪ್ಯಾಟಿ ಕವಿತಾ ಕಾಂಬಳೆ ಇತರರಿದ್ದರು