ಜಿಲ್ಲಾ ನ್ಯಾಯಾಲಯದಲ್ಲಿ ಯೋಗ ದಿನಾಚರಣೆ
ಬೀದರ್:ಜೂ.22: ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಶುಕ್ರವಾರ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯಕುಮಾರ ಎಂ. ಆನಂದಶೆಟ್ಟಿ ಅವರು ಸಸಿಗೆ ನೀರೆರೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನ್ಯಾಯಾಧೀಶರು, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಯೋಗಾಭ್ಯಾಸ ಮಾಡಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶಿವಶರಣಪ್ಪ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸಚಿನ್ ಕೌಶಿಕ್, ಪ್ರಧಾನ ಕೌಟುಂಬಿಕ ನ್ಯಾಯಾಧೀಶೆ ವಿ.ಕೆ. ಕೋಮಲಾ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋರೆ, ಎರಡನೇ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಭು ಎನ್. ಬಡಿಗೇರ, ಪ್ರಧಾನ ಸಿವಿಲ್ ನ್ಯಾಯಾಧೀಶ ಕಾಡಪ್ಪ ಹುಕ್ಕೇರಿ, ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ರಾಮಮೂರ್ತಿ, ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಂ.ಡಿ. ಸೇಜ್ ಚೌತಾಯಿ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ನಾಗೇಂದ್ರ ಬಿರಾದಾರ, ಜಗದೀಶ್ವರಿ ಇದ್ದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.