ರಾಜ್ಯ ಮಟ್ಟಕ್ಕೆ ಆಯ್ಕೆ
ವಿಜಯಪುರ.ಸೆ.೨೬-ಪ್ರಗತಿ ಆಂಗ್ಲ ಶಾಲೆಯ ವಿದ್ಯಾರ್ಥಿಗಳು ಸೂಲಿಬೆಲೆ ಬಳಿಯ ಬೆಟ್ಟಳ್ಳಿಯ ಹಾಗೂ ದೇವನಹಳ್ಳಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಲವಾರು ಕ್ರೀಡೆಗಳಲ್ಲಿ ಜಯಶೀಲರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಭಾನುವಾರದಂದು ಸೂಲಿಬೆಲೆ ಬಳಿಯ ಬೆಟ್ಟಳ್ಳಿಯ ಕಿಂಗ್ಡಮ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆದ ಕರಾಟೆ ಪಂದ್ಯದಲ್ಲಿ ಹಾಗೂ ಸೋಮವಾರದಂದು ದೇವನಹಳ್ಳಿಯ ವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕ್ರೀಡೆಗಳಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ೨೦೨೪-೨೫ ನೇ ಸಾಲಿನ ಜಿಲ್ಲಾ ಮಟ್ಟದ ಕರಾಟೆ ಮತ್ತು ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಪ್ರಗತಿ ಆಂಗ್ಲ ಶಾಲೆಯ ವಿದ್ಯಾರ್ಥಿಗಳು ಹಲವಾರು ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಗಳನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಎಂ .ಸತೀಶ್ ಕುಮಾರ್, ವ್ಯವಸ್ಥಾಪಕ ನಿರ್ದೇಶಕರಾದ ಎಸ್ .ಕೃಪಾಶಂಕರ್,
ಆಡಳಿತಾಧಿಕಾರಿಗಳಾದ ರಜತಕೃಪಾ ಶಂಕರ್, ಮುಖ್ಯೋಪಾದ್ಯಾಯರಾದ ಜೆ.ಎನ್. ಪ್ರಕಾಶ್‌ರವರು, ಎಚ್ ಶಾಂತಮೂರ್ತಿರವರು ಹಾಗೂದೈಹಿಕ ಶಿಕ್ಷಕರುಗಳಾದ ಲೋಕೇಶ್ ಮತ್ತು ಭಾನುಮತಿ ರವರುಗಳು ಉಪಸ್ಥಿತರಿರುವರು. ಎಲ್ಲಾ ಶಿಕ್ಷಕ ವೃಂದದವರು ಅಭಿನಂದಿಸಿ ಹಾಗೂ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಶುಭ ಹಾರೈಸಿದರು.