ಖೈದಿಗಳ ಮಾನಸಿಕ ಪರಿವರ್ತನೆಗೆ ಯೋಗಾಸನ ತರಬೇತಿ ಶಿಬಿರ ಸಹಕಾರಿ: ಡಾ ಅನಿತಾ.ಆರ್

ಸಂಜೆವಾಣಿ ವಾರ್ತೆ
ಶಿವಮೊಗ್ಗ: ಜೂ:೨೧ : ಮನುಷ್ಯನ ಸರ್ವತೋಮುಖ ಬೆಳವಣಿಗೆಗೆ ಪತಂಜಲಿ ಮಹರ್ಷಿಯ ಅಷ್ಟಾಂಗಯೋಗ ಪೂರಕವಾಗಿದೆ. ಪ್ರತಿಯೊಬ್ಬರು ತಮ್ಮ ನಿತ್ಯ ಜೀವನದಲ್ಲಿ ಯೋಗ ಅಭ್ಯಾಸವನ್ನು ಮಾಡಲು ಮುಂದೆ ಬರಬೇಕು. ಖೈದಿಗಳ ಮಾನಸಿಕ ಪರಿವರ್ತನೆಗೆ ಯೋಗಾಸನ ತರಬೇತಿ ಶಿಬಿರ ಸಹಕಾರಿಯಾಗಿದೆ ಎಂದು ಕೇಂದ್ರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಡಾ: ಅನಿತಾ ಆರ್. ಹೇಳಿದರು. ಅವರು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ, ಕೇಂದ್ರ ಕಾರಾಗೃಹ, ಶಿವಮೊಗ್ಗ, ಜೇಸಿಐ ಶಿವಮೊಗ್ಗ ಶಾಶ್ವತಿ ಘಟಕ, ಪತಂಜಲಿ ಯೋಗ ಕೇಂದ್ರ, ಪತಂಜಲಿ ಕರ್ನಾಟಕ ಜಾನಪದ ಕಲಾ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟಿçÃಯ ಯೋಗ ದಿನಾಚರಣೆ ಪ್ರಯುಕ್ತ ಖೈದಿಗಳ ಮಾನಸಿಕ ಪರಿವರ್ತನೆಗಾಗಿ ಏರ್ಪಡಿಸಿದ್ದ ವಿಶೇಷ ಯೋಗಾಸನ ತರಬೇತಿ ವ್ಯಕ್ತಿತ್ವ ವಿಕಸನ ಶಿಬಿರ ಯೋಗ ಗೀತಾಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕೇಂದ್ರ ಕಾರಾಗೃಹದಲ್ಲಿ ಇರುವ ಪ್ರತಿಯೊಬ್ಬರು ಯೋಗಾಸನ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಲು ಮುಂದೆ ಬರಬೇಕು. ಪತಂಜಲಿ ಸಂಸ್ಥೆ ವಿಭಿನ್ನವಾಗಿ ನುರಿತ ಯೋಗ ಶಿಕ್ಷಕರು ಸಂಪನ್ಮೂಲ ವ್ಯಕ್ತಿಗಳು ಜಾನಪದ ಕಲಾವಿದರ ಮೂಲಕ ಹೆಚ್ಚು ಅರ್ಥಬದ್ಧವಾಗಿ ಈ ಶಿಬಿರವನ್ನು ಆಯೋಜಿಸಿರುವುದು ಶ್ಲಾಘನೀಯವಾದದ್ದು ಎಂದರು.