ಗಣಿ ಗುತ್ತಿಗೆ: ನಿಗಧಿಪಡಿಸಿರುವ ರಾಜಸ್ವದ ಗುರಿ ಸಾಧಿಸಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜೂ.೨೧; ಮುಖ್ಯ ಖನಿಜ ಮತ್ತು ಉಪ ಖನಿಜ ಗಣಿ ಗುತ್ತಿಗೆಗಳಿಗೆ ನಿಗಧಿಪಡಿಸಿರುವ ರಾಜಸ್ವದ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಜಿಲ್ಲಾ ಟಾಸ್ಕ್ ಫೆÇೀರ್ಸ್ (ಗಣಿ) ಸಮಿತಿ, ಜಿಲ್ಲಾ ಮರಳು ಸಮಿತಿ ಹಾಗೂ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗಣಿ ಗುತ್ತಿಗೆಗಳಿಗೆ ನಿಗಧಿಪಡಿಸಿರುವ ರಾಜಸ್ವದ ಗುರಿಯನ್ನು ತಲುಪುವ ಬಗ್ಗೆ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.ಜಿಲ್ಲಾ ಮತ್ತು ತಾಲ್ಲೂಕು ಟಾಸ್ಕ್ ಫೆÇೀರ್ಸ್ ಸಮಿತಿಯ ಸದಸ್ಯರು ಪ್ರತ್ಯಾಜಿಸಲಾದ ಅಧಿಕಾರದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುವ ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ ಹಾಗೂ ದಾಸ್ತಾನು ತಡೆಯುವ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕಂದಾಯ, ಪೆÇಲೀಸ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ತಂಡ ಪ್ರಕರಣ ದಾಖಲಿಸಲು ಕ್ರಮವಹಿಸಬೇಕು ಎಂದು ಹೇಳಿದರು.ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಮಹೇಶ್ ಮಾತನಾಡಿ, ವೇದಾಂತ ಮೀನರಲ್ಸ್ ಅವರು ಗಣಿ ಚಟುವಟಿಕೆಯನ್ನು ಸ್ಥಗಿತಗೊಳಿಸಿದ ಕಾರಣ ಇಲಾಖೆ ಇಲಾಖೆ ಗುರಿ ತಲುಪಲು ಸಾಧ್ಯವಾಗಿರುವುದಿಲ್ಲ ಎಂದು ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ನಿಗಧಿಪಡಿಸಿರುವ ರಾಜಸ್ವ ಗುರಿ ತಲುಪಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು