ತಿರುಮಣಿ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ
ಪಾವಗಡ, ಜೂ. ೨೨- ತಾಲ್ಲೂಕಿನ ತಿರುಮಣಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಹೆಚ್.ವಿ. ವೆಂಕಟೇಶ್ ಭೇಟಿ ನೀಡಿದ ಸಂದರ್ಭದಲ್ಲಿ ವೈದ್ಯರು ಮತ್ತು ಸಿಬ್ಬಂದಿ ಇಲ್ಲದಿರುವುದನ್ನು ಕಂಡು ಜಿಲ್ಲಾ ಅರೋಗ್ಯಾಧಿಕಾರಿಗಳಿಗೆ ದೂರು ನೀಡಿರುವ ಪ್ರಸಂಗ ನಡೆದಿದೆ.
ತಿರುಮಣಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕ ವೆಂಕಟೇಶ್ ಅವರು ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳನ್ನು ಆರೋಗ್ಯ ಮತ್ತು ಚಿಕಿತ್ಸೆಯ ಬಗ್ಗೆ ವಿವರ ಪಡೆದರು.
ಔಷಧಿಗಳು ಇಲ್ಲದೆ ಇರುವುದು ಮತ್ತು ಸಿಬ್ಬಂದಿಯ ಕೊರತೆ ಬಗ್ಗೆ ವೈದ್ಯರು ಶಾಸಕರಿಗೆ ಮಾಹಿತಿ ನೀಡಿದರು.
ತಿರುಮಣಿ ಸೋಲಾರ್ ಪಾರ್ಕ್ ಸ್ಥಾಪನೆ ನಂತರ ಸಮುದಾಯ ಆರೋಗ್ಯ ಕೇಂದ್ರ ಹೆಚ್ಚು ಪ್ರಾಮುಖ್ಯತೆ ಪಡೆಯುತ್ತಿದೆ. ಅದಕ್ಕೆ ತಕ್ಕಂತೆ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸುವ ಅಗತ್ಯವಿದೆ. ಇಲ್ಲಿನ ವೈದ್ಯರು ಸಮಯ ಪಾಲನೆ ಮಾಡಿ ನಿಷ್ಠೆಯಿಂದ ಕೆಲಸ ನಿರ್ವಹಿಸಬೇಕಿದೆ ಎಂದರು.