ವಿಶ್ವ ಯೋಗ ದಿನಾಚರಣೆ
ಸಂಜೆವಾಣಿ ನ್ಯೂಸ್
ಮೈಸೂರು.ಜೂ.22:- ಕುವೆಂಪುನಗರದ ಓಂ ಯೋಗ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಶಿಕ್ಷಕಿ ಸುಮಾ ರಾಜು ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗ ಪಟುಗಳು ವಿವಿಧ ಆಸನಗಳನ್ನು ಪ್ರದರ್ಶಿಸಿದರು. ತಾಡಾಸನ, ವೃಕ್ಷಾಸನ, ಪಾದ ಹಸ್ತಾಸನ, ಅರ್ಧ ಚಕ್ರಾಸನ, ತ್ರಿಕೋಣಾಸನ, ಸಮದಂಡಾಸನ, ಭದ್ರಾಸನ, ವಜ್ರಾಸನ, ಅರ್ಧ ಉಷ್ಟ್ರಾಸನ, ಉಷ್ಟ್ರಾಸನ, ಶಶಂಕಾಸನ, ಉತ್ಥಾನ ಮಂಡೂಕಾಸನ, ವಕ್ರಾಸನ, ಮಕರಾಸನ, ಸರಳ ಭುಜಂಗಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧ ಹಲಾಸನ, ಪವನಮುಕ್ತಾಸನ, ಶವಾಸನ ಮಾಡಿದರು.
ಕಾರ್ಯಕ್ರಮದಲ್ಲಿ ಸುಮಾ ರಾಜು ಅವರ ಶಿಷ್ಯರು ಸೇರಿದಂತೆ ಹಲವರು ಇದ್ದರು.