ಸೈನಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಸಂಜೆವಾಣಿ ವಾರ್ತೆ,
ವಿಜಯಪುರ,ಜೂ.22:ನಗರದ ಸೈನಿಕ ಶಾಲೆಯ ಆವರಣದಲಿ ್ಲಅಂತಾರಾಷ್ಟ್ರೀಯ ಯೋಗ ದಿನವನ್ನುಆಚರಿಸಲಾಯಿತು.
ಯೋಗವು ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯಕೊಡುಗೆ. ಇದು ಮನಸ್ಸು ಮತ್ತು ದೇಹದ ಏಕತೆಯನ್ನು ಸಾರುತ್ತದೆ. ಆರೋಗ್ಯಕ್ಕೆ ಮತ್ತು ಯೋಗಕ್ಷೇಮಕ್ಕೆ ಸಮಗ್ರ ವಿಧಾನವಾಗಿದ್ದು, ಆರೋಗ್ಯಕ್ಕೆ ಒಂದು ಒಳ್ಳೆಯ ಔಷಧಿ ಎಂದು ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಲಾಯಿತು.
ಸಾಮರಸ್ಯ ಮತ್ತು ಶಾಂತಿಗಾಗಿ ಯೋಗವು ಸಹಾಯಕಾರಿಯಾಗಿದೆ. ಸ್ವಯಂ, ಸಮಾಜದ ಸ್ವಾಸ್ಥಕ್ಕಾಗಿ, ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬ ಘೋಷ ವಾಕ್ಯದೊಂದಿಗೆ ಈ ಬಾರಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನುಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲೆಯ 700ಕ್ಕೂ ಹೆಚ್ಚು ಕೆಡೆಟ್‍ಗಳು, ಶಿಕ್ಷಕರು, ಸಿಬ್ಬಂದಿ ಹಾಗೂ ಕುಟುಂಬ ವರ್ಗದವರು ಉಪಸ್ಥಿತರಿದ್ದರು.