ಅರ್ಥಪೂರ್ಣವಾಗಿ ಕೆಂಪೇಗೌಡ, ಡಾ. ಫ.ಗು. ಹಳಕಟ್ಟಿ ಜನ್ಮ ದಿನಾಚರಣೆಗೆ ನಿರ್ಧಾರ
ವಿಜಯಪುರ,ಜೂ.21 :ಜಿಲ್ಲಾಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಜೂ.27 ರಂದು ಹಾಗೂ ಜುಲೈ 2ರಂದು ಡಾ. ಫ.ಗು.ಹಳಕಟ್ಟಿಯವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅತ್ಯಂತ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲು ನಿರ್ಧರಿಸಲಾಯಿತು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಂಗವಾಗಿ ನಾಡಪ್ರಭು ಕೆಂಪೇಗೌಡ ಅವರ ಕುರಿತು ಫ್ರೌಡಶಾಲೆಯ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಿ, ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲು ತೀಮಾರ್ನಿಸಲಾಯಿತು.
ಜುಲೈ 2 ರಂದು ವಚನ ಪಿತಾಮಹ ಡಾ. ಫ.ಗು.ಹಳಕಟ್ಟಿ ಅವರ ಜಯಂತಿಯನ್ನು ಸಹ ಅತ್ಯಂತ ಸರಳವಾಗಿ, ವ್ಯವಸ್ಥಿತವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೆರವೇರಿಸಲಾಗುವುದು. ಡಾ. ಫ.ಗು.ಹಳಕಟ್ಟಿ ಅವರ ಬಗ್ಗೆ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಡಿವೈಎಸ್‍ಪಿ ಬಸವರಾಜ ಯಲಿಗಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕÀ ಕರಣ್‍ಕುಮಾರ, ಮುಖಂಡರಾದ ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ, ದೇವೆಂದ್ರ ಮೀರೆಕರ, ಗಿರೀಶ ಕುಲಕರ್ಣಿ, ಪ್ರಣವ ಕುರ್ಲೆ, ಪಿ.ಸಿ. ನಾಗಠಾಣ ಮತ್ತಿತರರು ಉಪಸ್ಥಿತರಿದ್ದರು.