ಉತ್ತಮ ಜೀವನ, ಉತ್ತಮ ಆರೋಗ್ಯ ಹಾಗೂ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಯೋಗ: ಶಶೀಲ ನಮೋಶಿ
ಕಲಬುರಗಿ:ಜೂ.21:ಯೋಗಾಸನ ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಕ್ರಿಯೇಯಾಗಬೇಕು ಪ್ರತಿದಿನ ಯೋಗ ಅಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯ, ಉತ್ತಮ ವಾತಾವರಣ ಹಾಗೂ ಗುಣಾತ್ಮಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಅನುಕೂಲವಾಗುತ್ತದೆ. 2014ರಲ್ಲಿ ಭಾರತದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಸಂಕಲ್ಪದಂತೆ ಪ್ರಾರಂಭವಾದ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಇಂದು ದಶ ವರ್ಷದ ಸಂಭ್ರಮ, ಇಂದಿನ ಅಂತರಾಷ್ಟ್ರೀಯ ಯೋಗ ದಿನಾಚಾರಣೆಯನ್ನು 30ಕ್ಕೂ ಅಧಿಕ ರಾಷ್ಟ್ರಗಳು ಆಚರಿಸುತ್ತಿರುವುದು ಸಂತಸದ ಸಂಗತಿ. ಜೂನ 21ಕ್ಕೆ ತನ್ನದೇ ಅದ ಮಹತ್ವವಿದ್ದು ಅಂದು ಆದಿನಾಥ ಮಹಾದೇವ ಯೋಗವನ್ನು ತನ್ನ ಅನುಯಾಯಿಗಳಿಗೆ ತಿಳಿಸಿದ ದಿನ ಇದನ್ನು ಪ್ರತಿದಿನ ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಬಹು ರೋಗಗಳು ನಮ್ಮಿಂದ ದೂರವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ವಿಧಾನ ಪರಿಷತ ಸದಸ್ಯರು, ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಭಾರತ ಸೇವಾದಳ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಶಶೀಲ ಜಿ. ನಮೋಶಿ ಅವರು ತಿಳಿಸಿದರು. ಅವರು ಇಂದು ಇಲ್ಲಿನ ಪಿ.ಡಿ.ಎ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ, ಕಲಬುರಗಿ, ಕೇಂದ್ರ ಸಂವಹನ ಇಲಾಖೆ, ಕಲಬುರಗಿ (ವಾರ್ತಾ ಮತ್ತು ಪ್ರಸಾರ ಸಚಿವಾಲಯ), ಮಹಿಳಾ ಪತಂಜಲಿ ಯೋಗ ಸಮಿತಿ, ಕಲಬುರಗಿ ಹಾಗೂ ಭಾರತ ಸೇವಾದಳ ಜಿಲ್ಲಾ ಸಮಿತಿ, ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ “ಮಹಿಳಾ ಸಬಲೀಕರಣಕ್ಕಾಗಿ ಯೋಗ” ಎನ್ನುವ ಸಂಕಲ್ಪವನ್ನಿಟ್ಟುಕೊಂಡು ಏರ್ಪಡಿಸಲಾದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು
ಈ ಯೋಗ ದಿನಾಚರಣೆಯಲ್ಲಿ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಉದಯಕುಮಾರ ಚಿಂಚೋಳಿ, ಆಡಳಿತ ಮಂಡಳಿ ಸದಸ್ಯರಾದ ಡಾ. ಎಸ್. ಆರ್. ಹರವಾಳ, ಅನೀಲಕುಮಾರ ಮರಗೋಳ, ಡಾ. ಶಿವಾನಂದ ಮೇಳಕುಂದಿಯವರು ಹಾಗೂ ಸಂಸ್ಥೆಯ ಆಡಳಿತಾಧಿಕಾರಿಗಳು ಪಾÀಲ್ಗೊಂಡಿದ್ದರು.
ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಗಳ ಪ್ರಾಚಾರ್ಯರು, ಉಪ-ಪ್ರಾಚಾರ್ಯರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು, ಅದೂ ಅಲ್ಲದೇ ಕೇಂದ್ರ ಸಂವಹನ ಇಲಾಖೆ ಕಲಬುರಗಿ, ಮಹಿಳಾ ಪತಂಜಲಿ ಯೋಗ ಸಮಿತಿ ಕಲಬುರಗಿ ಮತ್ತು ಭಾರತ ಸೇವಾದಳ ಜಿಲ್ಲಾ ಸಮಿತಿ, ಕಲಬುರಗಿಯ ಕಾರ್ಯದಶಿಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
ಯೋಗಾಸನವನ್ನು ಮಹಿಳಾ ಪತಾಂಜಲಿ ಯೋಗ ಸಮೀತಿಯ ಅಧ್ಯಕ್ಷರಾದ ಶ್ರೀಮತಿ ಸುಮಂಗಲಾ ಚಕ್ರವರ್ತಿವರು ನಡೆಯಿಸಿಕೊಟ್ಟರು ಹಾಗೂ ಪಿ.ಡಿ.ಎ. ತಾಂತ್ರಿಕ ಮಹಾವಿದ್ಯಾಲಯದ ಪ್ರೊ. ಸುಜಾತಾ ಪಾಟೀಲ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.