ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಕೊಲ್ಹಾರ:ಜೂ.21: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ವಾಲ್ಮೀಕಿ ನಿಗಮದಲ್ಲಿ ನಡೆಸಿರುವ ಭ್ರಷ್ಟಾಚಾರ ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವದರ ಹಾಗೂ ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಬಿಜೆಪಿ ವತಿಯಿಂದ ಗುರುವಾರ ಪಟ್ಟಣದ ವಿವಿಧ ವೃತ್ತಗಳ ಮೂಲಕ ಸಂಚರಿಸಿ ರಾಜ್ಯ ಸರ್ಕಾರದ ವಿರುದ್ದ ನಾನಾ ಘೋಷಣೆಗಳನ್ನು ಕೂಗುತ್ತಾ ಬೃಹತ್ ಪ್ರತಿಭಟನೆ ನಡೆಸಿದರು.
ಈ ವೇಳೆಯಲ್ಲಿ ಬಿಜೆಪಿ ಮುಖಂಡರಾದ ಟಿ ಟಿ ಹಗೇದಾಳ ಮಾತನಾಡಿ, ಸಿ.ಎಂ.ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಮುಂದುವರೆಸಲು ಪೆಟ್ರೋಲ್, ಡಿಸೇಲ್ ಬೆಲೆ ಸೇರಿದಂತೆ ಅಗತ್ಯ ವಸುತಿಗಳ ಬೆಲೆ ಏರಿಕೆ ಮಾಡಿ ಬಡ ಜನರ ನೆಮ್ಮದಿ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಸರ್ಕಾರದ ಈ ಕ್ರಮ ಸರಿಯಲ್ಲ, ಕೂಡಲೇ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸುತಿಗಳ ಬೆಲೆ ಇಳಿಸಬೇಕು, ನಿರ್ಲಕ್ಷ್ಯವಹಿಸಿದರೆ ಪ್ರತಿಭಟನೆಯ ಸ್ವರೂಪ ಬದಲಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು,
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ದೇವರಮನಿ ಮಾತನಾಡಿ, ಸಿದ್ದರಾಮಯ್ಯನವರು ವಿರೋಧ ಪಕ್ಷದಲ್ಲಿದ್ದಾಗ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದ್ದರು. ಆದರೆ ಈಗ ಗ್ಯಾರಂಟಿ ಯೋಜನೆಗಳು ಜಾರಿಗೆ ತಂದು, ಅಭಿವೃದ್ಧಿ ಕಾರ್ಯ ಮಾಡಲು ರಾಜ್ಯದ ಬೊಕ್ಕಸದಲ್ಲಿ ಹಣವಿಲ್ಲದೆ ದಿನ ನಿತ್ಯದ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಹೊರೆಯಾಗಿಸಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದ ಶಾಸಕರೇ ಇಂದು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದಾರೆ.
ತೈಲ ಬೆಲೆ ಏರಿಕೆ ನೇರವಾಗಿ ಎಲ್ಲಾ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗುತ್ತದೆ.ಗ್ಯಾರಂಟಿ ಯೋಜನೆಗಳಿಗಾಗಿ ಜನರ ಬದುಕನ್ನು ದುಸ್ತರವಾಗಿಸುವ ಕಾಂಗ್ರೆಸ್ ಸರ್ಕಾರಕ್ಕೆ ನಮ್ಮ ದಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಚಂದ್ರಶೇಖರ ಬೆಳ್ಳುಬ್ಬಿ ವಿನುತಕುಮಾರ್ ದೇಸಾಯಿ ಸಿದ್ಧರಾಮ ಕಾಖಂಡಕಿ ಜಗದೀಶ ಸುನಗದ ಬಾಬು ಭಜಂತ್ರಿ ಅಪ್ಪಾಸಿ ಮಟ್ಟಿಹಾಳ ಮಂಜುನಾಥ ತುಂಬರಮಟ್ಟಿ, ರಾಮಣ್ಣ ಉಪ್ಪಲದಿನ್ನಿ, ಶಿವಾನಂದ ಪತಂಗಿ, ಪುಂಡಲಿಕ ಭಾಟಿ, ಸುಭಾಶ ಭಜಂತ್ರಿ ಹಾಗೂ ಇತರರು ಇದ್ದರು.