ಗ್ರಾಮಗಳಲ್ಲಿ ಮುಗುಳುನಗೆಯ ಸಿಂಚನ ಶಿಬಿರ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಸೆ.26: ತಾಲ್ಲೂಕಿನ ಕಸಬಾ ಹೋಬಳಿಯ ಬಂಡಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ಗ್ರಾಮಗಳಲ್ಲಿ ಮುಗುಳುನಗೆಯ ಸಿಂಚನ” ಶಿಬಿರ ಮಾಡಲಾಯಿತು. ಶಿಬಿರದಲ್ಲಿ ಸಾರ್ವಜನಿಕರಿಗೆ ದಂತ ಆರೋಗ್ಯದ ಬಗ್ಗೆ ಆರೋಗ್ಯ ಶಿಕ್ಷಣ ನೀಡಿ, ದಂತ ಸಮಸ್ಯೆ ಇರುವವರಿಗೆ ಸೂಕ್ತ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಳಿಗೆ ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಬೂಕನಕೆರೆ ಮತ್ತು ಕಿಕ್ಕೇರಿಗೆ ರೆಫರ್ ಮಾಡಲಾಯಿತು.
ಶಿಬಿರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಪುನೀತ್.ಎನ್, ದಂತ ವೈದ್ಯರಾದ ಡಾ.ಪುಟ್ಟಸ್ವಾಮಿ, ಡಾ.ಕೋಮಲ ಹಾಗೂ ಡಾ.ಸುಪ್ರೀತ್, ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಹಾಜರಿದ್ದರು.