ಸ್ಪರ್ಧಾತ್ಮಕ ಯುಗದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಅವಶ್ಯಕತೆ ಅನಿವಾರ್ಯ: ಮಂಜುನಾಥ್
ಸಂಜೆವಾಣಿ ವಾರ್ತೆ
ಹನೂರು ಸೆ 26 :- ದಾನಿಗಳ ನೆರವಿನಿಂದ ಸ್ಮಾರ್ಟ್ ಕ್ಲಾಸ್ ಹಾಗೂ ಕಂಪ್ಯೂಟರ್ ತಂತ್ರಜ್ಞಾನಗಳು ವಿದ್ಯಾರ್ಥಿಗಳ ಕಲಿಕೆಗೆ ದೊರೆತಿರುವುದು ಉತ್ತಮವಾದದ್ದು, ಸ್ಪರ್ಧಾತ್ಮಕ ಯುಗದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಅವಶ್ಯಕ ಮತ್ತು ಅನಿವಾರ್ಯವಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ಅವರು ತಿಳಿಸಿದರು.
ತಾಲ್ಲೂಕಿನ ಬಸಪ್ಪನ ದೊಡ್ಡಿ ಉನ್ನತಿಕರಿಸಿದ ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಕೊಠಡಿ ಉದ್ಘಾಟನೆಯನ್ನು ನೆರವೇರಿಸಿ ನಂತರ ಮಾತನಾಡಿದ ಅವರು ದಾನ ಮಾಡುವ ಮನಸ್ಸು ಕೆಲವರಿಗಷ್ಟೇ ಇರುತ್ತದೆ ಈ ಪೈಕಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಅವರು ಸೇವೆ ಸರ್ಕಾರದ ಜೊತೆಗೆ ಕೈ ಜೋಡಿಸಿರುವುದು ಮೆಚ್ಚುವಂಥದ್ದು.
ಇಂದಿಗೂ ಎಷ್ಟೋ ಮನೆಗಳಲ್ಲಿ ಮೂರು ಹೊತ್ತಿನ ಊಟಕ್ಕೂ ಕಷ್ಟವಿದೆ. ಕಟ್ಟ ಕಡೆಯ ವ್ಯಕ್ತಿಗೆ ಮೂಲಭೂತ ಸೌಕರ್ಯ ದೊರಕಿಲ್ಲ. ಇಂತಹ ಹಿನ್ನಲೆಯಿಂದ ಶಾಲೆಗೆ ಬರುವ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿರುವ ಇಂತಹವರಿಗೆ ಮಧ್ಯಾಹ್ನದ ಬಿಸಿಯೂಟ ವರವಾಗಿದೆ. ಇದರಿಂದ ಮಕ್ಕಳ ಶಾಲಾ ಹಾಜರಾತಿ, ಶಾರಿರೀಕ ಮಾನಸಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ತಾ.ಪಂ.ಕಾರ್ಯನಿರ್ವಾಹಣ ಅಧಿಕಾರಿ ಉಮೇಶ್, ಅಕ್ಷರ ದಾಸೋಹ ವಿಭಾಗದ ರಂಗಸ್ವಾಮಿ, ಗ್ರಾ.ಪಂ.ಅಧ್ಯಕ್ಷ ಮುತ್ತುರಾಜು, ಎಸ್.ಡಿ.ಎಂ.ಸಿ.ಅಧ್ಯಕ್ಷ ಮಲ್ಲೇಶ್, ಮುಖ್ಯ ಶಿಕ್ಷಕ ವೀರಪ್ಪ, ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೊರೆಸ್ವಾಮಿ ಸೇರಿದಂತೆ ಶಾಲೆಯ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಇನ್ನಿತರರು ಹಾಜರಿದ್ದರು.