ಜಗದೀಶ ಕರಾಟೆ ಚಾಂಪಿಯನ್
ವಿಜಯಪುರ,ಅ.5:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ವಿಜಯಪುರ ನಡೆಸಿದ 2024-25ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ಕವಲಗಿಯ ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಗನಬಸವ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿದ್ಯಾರ್ಥಿ ಕುಮಾರ ಜಗದೀಶ ಶಿಳೀನ್ ಪ್ರಥಮ ಸ್ಥಾನ ಗಳಿಸಿದ್ದಾರೆ.
ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ (ಯತ್ನಾಳ), ಚೇರಮನ್ ನಾಮಿನಿ ಬಸಯ್ಯ ಹಿರೇಮಠ, ಎಲ್ಲ ನಿರ್ದೇಶಕರು, ಪದಾಧಿಕಾರಿಗಳು, ಕಾಲೇಜಿನ ಪ್ರಾಚಾರ್ಯರು ಹಾಗೂ ಎಲ್ಲ ಸಿಬ್ಬಂದಿ ಅಭಿನಂದಿಸಿದ್ದಾರೆ.