ಕುಸಿದು ಬಿದ್ದು ವ್ಯಕ್ತಿ ಸಾವು
ಹುಮನಾಬಾದ್: ಜೂ.21:ಕುಸಿದು ಬಿದ್ದು ವ್ಯಕ್ತಿಯೊರ್ವ ಮೃತಪಟ್ಟ ಘಟನೆ ಪಟ್ಟಣದ ಕೇಂದ್ರ
ಬಸ್ ನಿಲ್ದಾಣ ಮುಂಭಾಗದ ಮುಖ್ಯ ರಸ್ತೆಯಲ್ಲಿ ಗುರುವಾರ ನಡೆದಿದೆ.
ಬಸವಕಲ್ಯಾಣ ತಾಲೂಕಿನ ಬೆಲೂರ ಗ್ರಾಮದ ವಿನೋದ (30) ಮೃತ ವ್ಯಕ್ತಿ.
ಹುಮನಾಬಾದ್ ಪೆÇಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತವ್ಯಕ್ತಿಯ
ಪತ್ತೆ ಹಚ್ಚಿ ಆತನ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯ ಸಾವಿನ ಕುರಿತು
ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ ನಂತರ ನಿಖರ
ಮಾಹಿತಿ ತಿಳಿದು ಬರಲಿದೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ.