ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಸಂಜೆವಾಣಿವಾರ್ತೆ
ಹರಪನಹಳ್ಳಿ.ಜೂ.೨೦; ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಕೆ ಖಂಡಿಸಿ, ರಾಜ್ಯ ಕಾಂಗ್ರೇಸ್ ಸರ್ಕಾರದ ವಿರುದ್ದ ತಾಲೂಕು ಬಿಜೆಪಿ ಘಟಕದಿಂದ ಬೃಹತ್ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಿದರು.ಪಟ್ಟಣದ ಬಸ್‌ನಿಲ್ದಾಣದಿಂದ ಹೊಸಪೇಟೆ ರಸ್ತೆ ಮುಖಾಂತರ ಐ.ಬಿ.ವೃತ್ತದವರೆಗೆ ರಾಜ್ಯ ಸರ್ಕಾರದ ವಿರುದ್ದ ಘೋಷಣೆಯನ್ನು ಕೂಗಿದರು. ಬಳಿಕ ಐ.ಬಿ.ವೃತ್ತದ ಬಳಿ ಮಾನವ ಸರಪಳಿ ರಚಿಸಿ, ಪ್ರತಿಭಟನೆ ನಡೆಸಿದರು.ಪೆಟ್ರೋಲ್ ಮತ್ತು ಡಿಸೆಲ್ ಮೇಲಿನ ಶುಲ್ಕವನ್ನು ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಬೆಲೆ ಏರಿಕೆಗೆ ಕಾರಣವಾಗಿದೆ. ಇದರಿಂದ ಜನಸಾಮಾನ್ಯರ ಮೇಲೆ ಹೊರೆಯಾಗಲಿದೆ. ಅಗತ್ಯ ವಸ್ತುಗಳು ಸಹ ಬೆಲೆ ಏರಿಕೆಯಾಗಲಿದ್ದು ಎಲ್ಲಾ ವರ್ಗದ ಜನರು ಜೀವನ ನಡೆಸುವುದು ಕಷ್ಟವಾಗಲಿದೆ, ಆದ್ದರಿಂದ ಕೂಡಲೇ ರಾಜ್ಯ ಸರ್ಕಾರ ತಮ್ಮ ಆದೇಶವನ್ನು ಹಿಂಪಡೆಯಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರವಾದ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಮನವಿಯಲ್ಲಿ ಎಚ್ಚರಿಸಿದ್ದಾರೆ.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜೀವರೆಡ್ಡಿ, ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಲಕ್ಷö್ಮಣ, ಅರುಂಡಿ ನಾಗರಾಜ, ಮುದುಕವ್ವನವರ ಶಂಕರ, ಉದಯಕುಮಾರ, ಕಣಿವಿಹಳ್ಳಿ ಮಂಜುನಾಥ, ಕುಸುಮಾ ಜಗದೀಶ, ಬಾಗಳಿ ಕೊಟ್ರೇಶ್‌ಪ್ಪ, ಓಂಕಾರಗೌಡ, ಮಂಜುನಾಥ ಎನ್, ಚನ್ನನಗೌಡ, ಮಂಜ್ಯನಾಯ್ಕ, ಸುರೇಶ್, ರೇಖಾ, ಮುನೇಗೌಡ, ಗಿರಿಶ್, ಚರ‍್ಯಪ್ಪ, ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.