ಒತ್ತಡದ ಬದುಕಿನಿಂದ ಬಿಡುಗಡೆ ಹೊಂದಲು ಯೋಗ ಸಹಕಾರಿ

ಸಂಜೆವಾಣಿ ವಾರ್ತೆ
ಚಿತ್ರದುರ್ಗ, ಜೂ.20: ಯೋಗವನ್ನು ಯಾವುದೇ ಒಂದು ಧರ್ಮಕ್ಕೆ ಸೀಮಿತಗೊಳಿಸಬಾರದು. ಯೋಗ ವ್ಯಕ್ತಿಯ ಮನಸ್ಸು ಮತ್ತು ದೇಹದ ಮೇಲೆ ಧನಾತ್ಮಕ ಪರಿಣಾಮವನ್ನು ಬೀರುತ್ತದೆ ಎಂದು ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳು ಹೇಳಿದರು.ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ನಡೆದ ಯೋಗ ನಡಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತ, ಆರೋಗ್ಯದ ದೃಷ್ಟಿಯಿಂದ ಯೋಗ ಇರಬೇಕು. ಇಂದಿನ ದಿನಮಾನಗಳಲ್ಲಿ ಒತ್ತಡದ ಬದುಕು. ಇದರಿಂದ ಬಿಡುಗಡೆ ಹೊಂದಲು ಒಂದಷ್ಟು ಸಮಯ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ಇಟ್ಟುಕೊಂಡು ಬದುಕಬೇಕಿದೆ. ಯೋಗವು ಆರೋಗ್ಯಕರ. ದೇಹದಲ್ಲಿ ಆರೋಗ್ಯಕರ ಮನಸ್ಸಿನ ಗುರಿಯನ್ನು ಹೊಂದುವುದು ಜೀವನ ವಿಧಾನವಾಗಿದೆ. ಮನುಷ್ಯ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಜೀವಿ. ಜೀವನ ವಿಧಾನದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಲು ಯೋಗವು ಸಹಾಯ ಮಾಡುತ್ತದೆ. ಇಂದಿನ ಯೋಗ ನಡಿಗೆಗೆ ಒಂದಷ್ಟು ಅರ್ಥ ಸಿಕ್ಕಿದೆ ಎಂದರು.ಶ್ರೀ ಮುರುಘಾಮಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ಮಾತನಾಡಿ, ಆರೋಗ್ಯಪೂರ್ಣ ಮನಸ್ಸಿದ್ದರೆ ಪ್ರಬುದ್ಧ ಸಮಾಜ ನಿರ್ಮಿಸಲು ಸಾಧ್ಯ. ಕಳೆದ ಕೆಲವು ವರ್ಷಗಳಿಂದ ಯೋಗದ ಬಗ್ಗೆ ವಿಶ್ವವ್ಯಾಪಿ ವ್ಯಾಪಕ ಚರ್ಚೆಯಾಗುತ್ತಿದೆ. ಇದು ಪ್ರಪಂಚದಾದ್ಯAತ ಹರಡಿದೆ. ಯೋಗವೆಂದರೆ ದೇಹವನ್ನು ಬಗ್ಗಿಸುವುದು ಅಥವಾ ತಿರುಗಿಸುವುದು ಮತ್ತು ಉಸಿರನ್ನು ಹಿಡಿದಿಟ್ಟುಕೊಳ್ಳುವುದು ಮಾತ್ರವಲ್ಲ. ನಮ್ಮ ವಾಸ್ತವವನ್ನು ನೋಡುವ ಮತ್ತು ಅನುಭವಿಸುವ ಸ್ಥಿತಿಗೆ ನಮ್ಮನ್ನು ತರಲು ಇದೊಂದು ವಿಧಾನವಾಗಿದೆ. ನಮ್ಮ ಶಕ್ತಿಗಳ ಉತ್ಕೃಷ್ಟ ಭಾವ ಪರವಶವಾಗಲು ನಮ್ಮನ್ನು ಸಕ್ರಿಯಗೊಳಿಸಬೇಕು. ಆಗ ನಮ್ಮ ಸಂವೇದನಾಶೀಲವು ವಿಸ್ತಾರವಾಗುತ್ತದೆ. ಯೋಗವು ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಆತಂಕ, ಹೃದಯಸಂಬAಧಿ ಕಾಯಿಲೆUಳ ಆಪಾಯವನ್ನು ಕಡಿಮೆ ಮಾಡುತ್ತದೆ. ದೇಹ ಮತ್ತು ಮನಸ್ಸಿನ ನಡುವೆ ಸಾಮರಸ್ಯವನ್ನು ಆದರ್ಶೀಕರಿಸುವಲ್ಲಿ ಯೋಗವು ನೆರವಾಗುತ್ತದೆ ಎಂದರು.