ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಪ್ರಗತಿ ಪರಿಶೀಲನ ಸಭೆ
ಸಂಜೆವಾಣಿ ವಾರ್ತೆ
ಹನೂರು ಜೂ 21:- ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪನಾಗ್, ಸಾಲೂರು ಮಠಾಧ್ಯಕ್ಷರು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ಅವರು ಅಧ್ಯಕ್ಷತೆಯಲ್ಲಿ ಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
ಸಭೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದರು. 512 ಕೊಠಡಿಗಳ ಅತಿಥಿ ಗೃಹ ನಿರ್ಮಾಣ ಕಾಮಗಾರಿ. ಎರಡನೇ ಹಂತದ ಕಾಮಗಾರಿ 386 ಕೊಠಡಿಗಳ ಕಾಮಗಾರಿಯಲ್ಲಿ ಬಣ್ಣ ಬಳಿಯುವುದು ನೀರು ಸರಬರಾಜು ಹಾಗೂ ವಿದ್ಯುಧೀಕರಣ ಕೆಲಸ ಪ್ರಗತಿಯಲ್ಲಿದೆ ಆದಷ್ಟು ಬೇಗ ಕಾಮಗಾರಿ ಮುಗಿಸಬೇಕು.
ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟ ದೇವಸ್ಥಾನದ ವರೆಗೆ ಕಾಲ್ನಡಿಗೆ ಮಾರ್ಗದಲ್ಲಿ ಗ್ರಾನೈಟ್ ಮೆಟ್ಟಿಲು ನಿರ್ಮಾಣ ಹಾಗೂ ಇತರೆ ಮೂಲಭೂತ ಸೌಕರ್ಯ ಅಭಿವೃದ್ಧಿ ಕೆಲಸ ಆದಷ್ಟು ಬೇಗ ಮುಗಿಸಿ. ಜನರು ತಂಗುವ ಡಾರ್ಮಿಟರಿ ಕಟ್ಟಡ ನಿರ್ಮಾಣ ಕಾಮಗಾರಿ ಆದಷ್ಟು ಬೇಗ ಮುಗಿಸಬೇಕು ಎಂದು ಇಂಜಿನಿಯರ್ ಅವರಿಗೆ ತಾಕೀತು ಮಾಡಿದರು.
ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ದೀಪದಗಿರಿ ಒಡ್ಡಿನಲ್ಲಿ ಶ್ರೀ ಮಹದೇಶ್ವರ ಸ್ವಾಮಿಯ ಪ್ರತಿಮೆಯ ಅವರಣದ ಸುತ್ತಲೂ ತಡೆಗೊಡೆ ನಿರ್ಮಾಣ ಕಾಮಗಾರಿ. ಬಸ್ ನಿಲ್ದಾಣದ ಬಳಿ ಇರುವ ಶೌಚಾಲಯ ಮತ್ತು ಸ್ನಾನಗೃಹ ನಿರ್ಮಾಣ ಕಾಮಗಾರಿ. ಒಳಚರಂಡಿ ನೀರು ಸರಬರಾಜು ಸೇರಿದಂತೆ ಇನ್ನಿತರ ಅಭಿವೃದ್ಧಿ ಪ್ರಾಧಿಕಾರ ಪ್ರಗತಿ ಬಗ್ಗೆ ಮಾಹಿತಿ ಪಡೆದರು.
ದೀಪದ ಗಿರಿ ಒಡ್ಡು ಪ್ರತಿಮೆ ಒಳಾಂಗಣ ಕಾಮಗಾರಿ. ಮತ್ತು ತಡೆಗೊಡೆ ನಿರ್ಮಾಣ ಕಾಮಗಾರಿ. ಹಾಗೂ ಪ್ರಾಧಿಕಾರದಲ್ಲಿ ಕೈಗೊಂಡಿರುವ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿದೆ. ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಲು ಒಂದು ವಾರದಲ್ಲಿ ಕಾಮಗಾರಿ ಪ್ರಗತಿಯಲ್ಲಿ ಸಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಇಂಜಿನಿಯರ್ ಅವರಿಗೆ ತಾಕಿತು ಮಾಡಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮನೆಗಳು ಹಾಗೂ ಲಾಡ್ಜ್ ಇರುವುದರ ಬಗ್ಗೆ ಮಾಹಿತಿ ಪಡೆದರು.ಅನಧಿಕೃತವಾಗಿ ಕಟ್ಟುವ ಕಟ್ಟಡಗಳ ಪರಿಶೀಲ ನಡೆಸಬೇಕು. ತೆರಿಗೆ ವಸೂಲಿ ಮಾಡಬೇಕು. ನೀರಿನ ಸಮಸ್ಯೆಯಾಗಿದಂತೆ ನೋಡಿಕೊಳ್ಳಬೇಕು, ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಈಗಾಗಲೇ ಅಕ್ರಮ ಮತ್ತು ಮಾರಾಟ ಮಾಡುತ್ತಿರುವವರ ಬಗ್ಗೆ ಮಾಹಿತಿ ಬಂದಿದೆ. ಅಬಕಾರಿ ಇಲಾಖೆ ಪೆÇಲೀಸ್ ಇಲಾಖೆಯವರು ಗಮನಹರಿಸಿ ಅಕ್ರಮ ಮಧ್ಯ ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಅಧಿಕಾರಿಗೆ ತಿಳಿಸಿದರು.
ದೀಪದಗಿರಿ ಒಡ್ಡು ಪ್ರತಿಮೆ ಕಾಮಗಾರಿ ವೀಕ್ಷಣೆ: ಸಭೆ ಮುಗಿದ ನಂತರ ದೀಪದಗಿರಿ ಒಡ್ಡಿನಲ್ಲಿ ಮಹದೇಶ್ವರ ಪ್ರತಿಮೆಯ ತಳಭಾಗದ ಒಳಾಂಗಣದಲ್ಲಿ ನಡೆಯುತ್ತಿರುವ ಮಹದೇಶ್ವರ ಚರಿತ್ರೆ ಬಗ್ಗೆ ಪ್ರತಿಮೆಗಳ ಮೂಲಕ ಅನಾವರಣ ಮಾಡಲಾಗುತ್ತಿರುವ ಕಾಮಗಾರಿಗಳ ಬಗ್ಗೆ ಶಾಸಕ ಮಂಜುನಾಥ್ ಅವರು ಜಿಲ್ಲಾಧಿಕಾರಿಗಳು ವೀಕ್ಷಣೆ ಮಾಡಿ ಮಾಹಿತಿ ಪಡೆದರು
ಮುಖ್ಯಮಂತ್ರಿ ಆಗಮನದ ಹಿನ್ನೆಲೆ ಕಾಮಗಾರಿಗಳನ್ನು ಪೂರ್ಣಗೊಳಿಸಿ:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಸ್ಟ್ 24ರಂದು ಚಾಮರಾಜನಗರದಲ್ಲಿ ಜಿಲ್ಲಾ ನೇತ್ರತ್ವದಲ್ಲಿ ಸಭೆ ನಡೆಯಲಿದೆ. ಮಧ್ಯಾಹ್ನದ ನಂತರ ಮಾದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ಸಭೆ ನಡೆಯಲಿದೆ. ಬೆಟ್ಟಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡುವ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸಬೇಕು.
ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಶೌಚಾಲಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಪ್ರಾಧಿಕಾರ ಕಾರ್ಯದರ್ಶಿ ರಘು ಅವರಿಗೆ ಸಲಹೆ ನೀಡಿದರು.
ಇಂಡಿಗನತ್ತ ಗ್ರಾಮಕ್ಕೆ ರಸ್ತೆ ನಿರ್ಮಿಸಲು ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ ಇದಕ್ಕೆ ಅರಣ್ಯ ಇಲಾಖೆಯವರು ಸಹಕಾರ ನೀಡಬೇಕು. ಗುಡ್ಡಗಾಡು ಪ್ರದೇಶದ ಜನರ ಅನುಕೂಲಕ್ಕೆ ನಿಮ್ಮ ಸಹಕಾರ ಅವರಿಗೆ ಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿ ಡಿಸಿಎಫ್ ಸಂತೋಷ ಅವರಿಗೆ ತಿಳಿಸಿದರು.