ಮಕ್ಕಳ ಶೈಕ್ಷಣಿಕ ನೆರವಿಗೆ ಕೈಜೋಡಿಸಬೇಕು
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಜೂ.21: ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕಾರ ನೀಡುವುದು ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ನೆರವಿಗೆ ಕೈಜೋಡಿಸುವ ಅಭಿಯಾನವಾಗಬೇಕು ಎಂದು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಪ್ರಭುಕುಮಾರ್ ಅಭಿಪ್ರಾಯಪಟ್ಟರು.
ಅವರು ತಾಲೂಕಿನ ಬೂಕನಕೆರೆ ಹೋಬಳಿಯ ನಾಟನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಟ್ರ?ಯಾಕ್ ಸೂಟ್ ವಿತರಣಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಇಂದಿನ ಸಮಾಜದಲ್ಲಿ ಮೋಜು ಮಸ್ತಿ ಪಾರ್ಟಿಗಳ ಮುಖಾಂತರ ಹುಟ್ಟುಹಬ್ಬವನ್ನು ಆಚರಿಸುವವರ ಸಂಖ್ಯೆ ಹೆಚ್ಚಾಗಿದೆ ಆದರೆ ಗ್ರಾಮದ ಬೋರ್‍ವೆಲ್ ಮಹೇಶ್‍ರವರು ತನ್ನ ಗ್ರಾಮದ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗಾಗಿ ತಮ್ಮ ಕೈಲಾದಷ್ಟು ಸಹಕಾರ ನೀಡಲು ಮುಂದೆ ಬಂದಿರುವುದು ಸಂತಸದ ವಿಷಯ. ತಮ್ಮ ಸಂಪಾದನೆಯ ಸುಮಾರು 40000ರೂ ಬೆಲೆಬಾಳುವ ಉತ್ತಮ ಗುಣಮಟ್ಟದ ಟ್ರ?ಯಾಕ್‍ಸೂಟ್ ಅನ್ನು ಮಕ್ಕಳಿಗೆ ವಿತರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ ಅದಕ್ಕಾಗಿ ಶಿಕ್ಷಣ ಇಲಾಖೆ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಶಿಕ್ಷಣ ಸಂಯೋಜಕರಾದ ವೇಣುಗೋಪಾಲ್ ಕರ್ನಾಟಕ ಘನ ಸರ್ಕಾರ ರೂಪಿಸಿರುವ “ನನ್ನ ಶಾಲೆ ನನ್ನ ಕೊಡುಗೆ”ಯೋಜನೆಯಲ್ಲಿ ತಾವು ಕಲಿತ ಶಾಲೆಗೆ ಅಪಾರವಾದ ಕೊಡುಗೆ ನೀಡುತ್ತಿರುವ ಮಹೇಶ್ ರವರ ಈ ಕಾರ್ಯಕ್ರಮ ನಮ್ಮ ತಾಲೂಕಿನಲ್ಲಿ ಈ ಶೈಕ್ಷಣಿಕ ವರ್ಷದ ಶುಭಾರಂಭ ಮಾಡಿದೆ. ಹಿರಿಯ ವಿದ್ಯಾರ್ಥಿಗಳು ಮತ್ತು ದಾನಿಗಳ ಮೂಲಕ ಶಾಲೆಯ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಲೆಯ ಎಲ್ಲಾ ಶಿಕ್ಷಕ ವೃಂದದದವರಿಗೆ ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ದಿವ್ಯ ಮುಖ್ಯ ಶಿಕ್ಷಕ ಹೆಚ್.ಎಸ್.ಕಾಂತರಾಜು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹೆಚ್.ಆರ್.ಪೂರ್ಣಚಂದ್ರತೇಜಸ್ವಿ, ಶಿಕ್ಷಕರಾದ ಸಿ.ಆರ್.ಗೀತಾ, ಬಿ.ಎಸ್.ಆಶಾ, ಅರ್ಪಿತಾ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೆÇೀಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.