ಶಿಗ್ಗಾವಿಗೆ ಮಹಿಮಾ ಪಟೇಲ್ ಟಕೆಟ್ ನೀಡಲು ಜೆಡಿಯು ಆಗ್ರಹ
ಕೋಲಾರ: ೨೫- ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ತೆರವಾಗಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಎನ್.ಡಿ.ಎ ಮೈತ್ರಿಕೂಟದ ಜೆಡಿಯು ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ ಪಾಟೀಲ್ ಅವರನ್ನು ಘೋಷಿಸುವಂತೆ ಎನ್.ಡಿ.ಎ ಮೈತ್ರಿಕೂಟದ ಪಕ್ಷಗಳನ್ನು ಜೆಡಿಯು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದರು.
ಜೆಡಿಯು ಪಕ್ಷದ ರಾಜ್ಯ ಕೇಂದ್ರದ ಕಛೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಒತ್ತಾಯಿಸಿದ ಅವರು ದೇಶದಲ್ಲಿ ಸತತವಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರಕಾರವು ಅಧಿಕಾರಕ್ಕೆ ಬರಲು ಜೆಡಿಯು ಪಕ್ಷವು ಪ್ರಮುಖವಾದ ಪಾತ್ರವನ್ನು ವಹಿಸಿದ್ದಾರೆ ದೇಶದಲ್ಲಿ ಜೆಡಿಯು ಪಕ್ಷದ ವರಿಷ್ಠ ಬಿಹಾರ ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ಮೈತ್ರಿಕೂಟದ ೨೮ ಅಭ್ಯರ್ಥಿಗಳಿಗೆ ಜೆಡಿಯು ಪಕ್ಷವು ಬೆಂಬಲವನ್ನು ನೀಡಿದ್ದ ಭಾಗವಾಗಿ ರಾಜ್ಯದಲ್ಲಿ ಎನ್.ಡಿ.ಎ ಮೈತ್ರಿಕೂಟವು ಹೆಚ್ಚು ಸ್ಥಾನಗಳನ್ನು ಪಡೆಯಲು ಸಾಧ್ಯವಾಗಿದೆ ಎಂದರು.
ರಾಜ್ಯದ ಶಿಗ್ಗಾಂವಿ ಕ್ಷೇತ್ರದಿಂದ ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದು ಶಿಗ್ಗಾಂವಿ ಕ್ಷೇತ್ರದಿಂದ ಮುಂದೆ ನಡೆಯಲಿರುವ ಉಪ ಚುನಾವಣೆಗೆ ರಾಜ್ಯದಲ್ಲಿ ಜನಪ್ರಿಯ ಮುಖ್ಯಮಂತ್ರಿಯಾಗಿದ್ದ ದಿವಂಗತ ಜೆ.ಹೆಚ್ ಪಾಟೀಲ್ ಅವರ ಸುಪುತ್ರ, ಮಾಜಿ ಶಾಸಕ ಹಾಗೂ ಜೆಡಿಯು ಪಕ್ಷದ ರಾಜ್ಯ ಅಧ್ಯಕ್ಷರಾಗಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಶ್ರಮಿಸುತ್ತಿದ್ದು ಇವರನ್ನು ಎನ್.ಡಿ.ಎ ಮೈತ್ರಿಕೂಟದ ಪಕ್ಷಗಳಿಂದ ಜೆಡಿಯು ಅಭ್ಯರ್ಥಿಯಾಗಿ ಆಯ್ಕೆ ಮಾಡುವಂತೆ ವರಿಷ್ಠರು ಮುಂದಾಗಬೇಕು ಎಂದು ಒತ್ತಾಯಿಸಿದರು.