ಗಮನ ಸೆಳೆದ ಚಿಣ್ಣರ ಸರಳ ಯೋಗ
ಸಂಜೆವಾಣಿ ವಾರ್ತೆ,
ವಿಜಯಪುರ,ಜೂ.21: ಯೋಗ-ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೆಯೇ ಪ್ರಕೃತಿ ಮತ್ತು ಮನುಷ್ಯರ ನಡುವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ಆರೋಗ್ಯ ಮತ್ತು ಯೋಗಕ್ಷೇಮದ ಸಮಗ್ರ ವಿಧಾನವಾಗಿದೆ.
ಜೂನ್ 21 ರಂದು ವಿಶ್ವ ಯೋಗ ದಿನಾಚರಣೆ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಮಕ್ಕಳಾದ ಅನುಶ್ರೀ, ಶ್ರೀನಿಧಿ, ಸಮೃದ್ಧಿ, ಶಾಂತಮ್ಮ, ದೀಪಾ, ಸಾಕ್ಷಿ, ಪವಿತ್ರಾ, ಮೋಕ್ಷಾ ಅವರು ಸರಳವಾದ ಯೋಗ ಮಾಡಿ ಎಲ್ಲರ ಗಮನ ಸೆಳೆದರು.
