ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ: ಆರ್.ಅಶೋಕ್ ಸೇರಿ ಹಲವರ ಬಂಧನ
ಕಲಬುರಗಿ,ಜೂ.20-ರಾಜ್ಯ ಸರ್ಕಾರ ದಿಢೀರನೆ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡುವ ಮೂಲಕ ರಾಜ್ಯದ ಜನರ ಮೇಲೆ ಬೆಲೆ ಏರಿಕೆಯ ಬರೆ ಹಾಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಕಲಬುರಗಿಯ ಎಸ್‍ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಎತ್ತಿನ ಬಂಡಿಗಳಲ್ಲಿ ಮೆರವಣಿಗೆ ಕೈಗೊಂಡು ಪ್ರತಿಭಟಿಸಿದರು. ಈ ವೇಳೆ ಪೊಲೀಸರು ಪ್ರತಿಪಕ್ಷ ನಾಯಕ ಆರ್.ಅಶೋಕ ಸೇರಿದಂತೆ ಹಲವರನ್ನು ಬಂಧಿಸಿದರು.
ಇದೇ ವೇಳೆ ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ, ಬಿ.ಜಿ.ಪಾಟೀಲ್, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಅಮರನಾಥ ಪಾಟೀಲ, ಚಂದು ಪಾಟೀಲ್, ಮೇಯರ್ ವಿಶಾಲ ದರ್ಗಿ, ರಾಜು ವಾಡೇಕರ್, ಶೋಭಾ ಬಾಣಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.