ಬೆಳಗಾವಿ ಕನ್ನಡ ಮಾಧ್ಯಮ ಶಾಲೆಗೆ ಮರಾಠಿ ಶಿಕ್ಷಕರ ನೇಮಕಕ್ಕೆ : ನಾಲವಾರಕರ್ ಆಕ್ರೋಶ
ಕಲಬುರಗಿ,ಜೂ.20-ಬೆಳಗಾವಿ ಕನ್ನಡ ಮಾಧ್ಯಮ ಶಾಲೆಗೆ ಮರಾಠಿ ಶಿಕ್ಷಕರ ನೇಮಕಕ್ಕೆ ಕರವೇ ರಾಜ್ಯ ವಕ್ತಾರರಾದ ಮಂಜುನಾಥ ನಾಲವಾರಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಕನ್ನಡ ಮಾಧ್ಯಮ ಶಾಲೆಗೆ ಮರಾಠಿ ಶಿಕ್ಷಕರ ನೇಮಕದಿಂದ ಕನ್ನಡ ಭಾಷೆಗೆ ಅನ್ಯಾಯವಾಗುತ್ತದೆ. ಕೂಡಲೇ ಈ ಆದೇಶವನ್ನು ರದ್ದುಪಡಿಸಬೇಕು ಎಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಗ್ರಹಿಸಿದ್ದಾರೆ.