ಸಾರ್ವಜನಿಕರಿಂದ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಜೂ.20 : ಹುಣಸಗಿ ತಾಲೂಕು ತಹಶೀಲ್ದಾರ ಕಚೇರಿಯ ಆವರಣದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಜನಸ್ಪಂದನ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು
ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡಿ, ಹುಣಸಗಿ ತಾಲೂಕು ಪಂಚಾಯತ ಇಓ ಬಸವರಾಜ ಹಿರೇಮಠ, ಹುಣಸಗಿ ತಹಶೀಲ್ದಾರ ಬಸಲಿಂಗಪ್ಪ ನಾಯ್ಕೋಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.