ಮುಖ್ಯಮಂತ್ರಿಗಳ ಸಲಹೆಗಾರರ ಪ್ರವಾಸ
ಕಲಬುರಗಿ:ಜೂ.19: ಮುಖ್ಯಮಂತ್ರಿಗಳ ಸಲಹೆಗಾರರು (ನೀತಿ ಮತ್ತು ಕಾರ್ಯಕ್ರಮ) ಮತ್ತು ಆಳಂದ ಶಾಸಕ ಬಿ.ಆರ್.ಪಾಟೀಲ ಅವರು ಧಾರವಾಡ ಜಿಲ್ಲೆಯಿಂದ ರೈಲಿನ ಮೂಲಕ ಜೂನ್ 21 ರಂದು ಬೆಳಿಗ್ಗೆ 6 ಗಂಟೆಗೆ ಕಲಬುರಗಿ ನಗರಕ್ಕೆ ಆಗಮಿಸುವರು.
ಜೂನ್ 21 ಮತ್ತು 22 ರಂದು ಅಳಂದ ಮತ್ತು ಕಲಬುರಗಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು. ಜೂನ್ 23 ರಂದು ಆಳಂದ ತಾಲೂಕಿನ ಧಂಗಾಪೂರ ಗ್ರಾಮದಲ್ಲಿ ಬೆಳಿಗ್ಗೆ 11 ಗಂಟೆಗೆ ಆಯೋಜಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.