ಜೂ.21ಕ್ಕೆ ವಕೀಲರಿಗೆ ಉಪನ್ಯಾಸ ಮಾಲಿಕೆ

ಸಂಜೆವಾಣಿ ವಾರ್ತೆ
ದಾವಣಗೆರೆ.ಜೂ.: ಜಿಲ್ಲಾ ವಕೀಲರ ಸಂಘ, ದಾವಣಗೆರೆ ವತಿಯಿಂದ ನಗರದ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಜೂನ್ 21ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರೀಕ ಸುರಕ್ಷ ಸಂಹಿತೆ, ಭಾರತೀಯ ಸಾಕ್ಷಿ ಮಸೂದೆ-2023 ಕುರಿತು ಉಪನ್ಯಾಸ ಮಾಲಿಕೆ-9ನ್ನು ಆಯೋಜಿಸಲಾಗಿದೆ.ಉಪನ್ಯಾಸ ಮಾಲಿಕೆ-9ನ್ನು ಭಾರತದ ಲೋಕಪಾಲ ನ್ಯಾಯಾಂಗ ಸದಸ್ಯರೂ, ಹಿಮಾಚಲ ಪ್ರದೇಶದ ಉಚ್ಛ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಲ್.ನಾರಾಯಣಸ್ವಾಮಿ ಉದ್ಘಾಟಿಸಲಿದ್ದು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದಆರ್.ಎನ್.ಪ್ರವೀಣ್‌ಕುಮಾರ್ ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೂ, ಎಸ್‌ಟಿಎಫ್‌ಸಿ ಆದ ಶ್ರೀರಾಮ ನಾರಾಯಣ ಹೆಗಡೆ ಆಗಮಿಸಲಿದ್ದಾರೆ ಎಂದು ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ.ಬಸವರಾಜ್ ಗೋಪನಾಳು, ಕಾರ್ಯದರ್ಶಿ ಎಸ್.ಬಸವರಾಜ್, ಸಹ ಕಾರ್ಯದರ್ಶಿ ಎ.ಎಸ್.ಮಂಜುನಾಥ್ ಹಾಗೂ ಕಾರ್ಯಕಾರಿ ಮಂಡಳಿಯ ಸದಸ್ಯರು ತಿಳಿಸಿದ್ದಾರೆ.